ಧರ್ಮಸ್ಥಳಕ್ಕೆ ಶೀರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಭೇಟಿ

0
50

ಭಾವೀ ಪರ್ಯಾಯ ಪೀಠಾಧೀಶರಾದ ಹಾಗೂ ಪ್ರಥಮ ಬಾರಿಗೆ ಸರ್ವಜ್ಞ ಪೀಠವನ್ನು ಅಲಂಕರಿಸಲಿರುವ ಹಾಗೂ ಪ್ರಸ್ತುತ ಪರ್ಯಾಯ ಪೂರ್ವಭಾವಿ ಸಂಚಾರದಲ್ಲಿರುವ ಶೀರೂರು ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಇಂದು ಧರ್ಮಸ್ಥಳ ಕ್ಷೇತ್ರಕ್ಕೆ ತಮ್ಮ ಶಿಷ್ಯರೊಂದಿಗೆ ಭೇಟಿ ನೀಡಿದರು .

ಶೀರೂರು ಶ್ರೀಗಳನ್ನು ಸರ್ವ ಗೌರವಗಳೊಂದಿಗೆ ವಿಜ್ರಂಭಣೆಯಿಂದ ಸ್ವಾಗತಿಸಿದರು. ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಅವರ ಅಧಿಕೃತ ನಿವಾಸ (ಬೀಡು) ನಲ್ಲಿ ಭೇಟಿ ಮಾಡಿದರು. ಹಾಗೂ ಧರ್ಮಸ್ಥಳ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು . ಈ ಸಂದರ್ಭದಲ್ಲಿ ಶೀರೂರು ಮಠದ ದಿವಾನರಾದ ಡಾ.ಉದಯ ಕುಮಾರ್ ಸರಳತ್ತಾಯ ಹಾಗೂ ಧರ್ಮಸ್ಥಳ ಕ್ಷೇತ್ರದ ಅರ್ಚಕ ವರ್ಗ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here