ಉಡುಪಿ : ಬ್ರಹ್ಮಾವರ ತಾಲೂಕಿನ ಹಾವಂಜೆ ಗ್ರಾಮದ ಮುಗ್ಗೇರಿ ಹಾಗೂ ಉಳ್ಳೂರು ಗ್ರಾಮದ ಅಮ್ಮುಂಜೆ ಪರಿಸರದ ಸ್ವರ್ಣ ನದಿಯಲ್ಲಿ ಅಕ್ರಮಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ 17 ಬೋಟ್ ಗಳನ್ನು ಬ್ರಹ್ಮಾವರ ಪೊಲೀಸರು ವಶ ಪಡಿಸಿಕೊಂಡಿದ್ದಾರೆ.
ಅಕ್ರಮ ಮರಳುಗಾರಿಕೆಗೆ ಸಂಬಂಧಿಸಿದಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಮುಂದುವರಿದಿತ್ತು. ಸ್ವರ್ಣ ನದಿಯಲ್ಲಿ ಬೋಟ್ ಗಳನ್ನು ಉಪಯೋಗಿಸಿ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿರುವ ಬಗ್ಗೆ ಮಾಹಿತಿ ಲಭಿಸಿತ್ತು.
ಜಿಲ್ಲಾ ಪೊಲೀಸ್ ವರಿಷ್ಠ ಹರಿರಾಂ ಶಂಕರ್ ನಿರ್ದೇಶನದಂತೆ ಹಾಗೂ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯ್ಕ, ಉಡುಪಿ ಜಿಲ್ಲಾ ಪೊಲೀಸ್ ಉಪಾಧೀಕ್ಷಕ ಪ್ರಭು ಡಿ.ಟಿ ಮತ್ತು ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕ ಗೋಪಿಕೃಷ್ಣ ಅವರ ಮಾರ್ಗದರ್ಶನದಲ್ಲಿ ಬ್ರಹ್ಮಾವರ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಅಶೋಕ್ ಮಾಳಾಬಗಿ, ಸುದರ್ಶನ್ ದೊಡ್ಡಮನಿ ಹಾಗೂ ಠಾಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು.
ಮುಗ್ಗೇರಿ ಹಾಗೂ ಅಮ್ಮುಂಜೆ ಸ್ವರ್ಣ ನದಿಯ ಇಕ್ಕೆಲಗಳಲ್ಲಿ ಬಚ್ಚಿಡಲಾಗಿದ್ದ 17 ಬೋಟ್ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ತನಿಖೆ ಮುಂದುವರಿದಿದೆ.
ಫೋಟೋ: ಯುಡಿಪಿ-2-12-ಬೋಟ್
ಬ್ರಹ್ಮಾವರ ತಾಲೂಕಿನ ಮುಗ್ಗೇರಿ ಹಾಗೂ ಅಮ್ಮುಂಜೆ ಸ್ವರ್ಣ ನದಿಯ ಇಕ್ಕೆಲಗಳಲ್ಲಿ ಬಚ್ಚಿಡಲಾಗಿದ್ದ ಅಕ್ರಮವಾಗಿ ಮರಳು ತೆಗೆಯಲು ಬಳಸುತ್ತಿದ್ದ ಬೋಟ್ ಗಳನ್ನು ಪೊಲೀಸರು ವಶಕ್ಕೆ ಪಡೆದಿರುವುದು.

