ಬೆಂಗಳೂರು : ಸಂಧ್ಯಾ ಥಿಯೇಟರ್‌ನಲ್ಲಿ ಮಹಿಳಾ ಶೌಚಾಲಯದಲ್ಲಿ ಗುಪ್ತ ಕ್ಯಾಮರಾ ಪತ್ತೆ

0
135

ಬೆಂಗಳೂರಿನ ಮಡಿವಾಳದ ಸಂಧ್ಯಾ ಥಿಯೇಟರ್‌ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಇಲ್ಲಿನ ಮಹಿಳಾ ಶೌಚಾಲಯದಲ್ಲಿ ಯುವಕನೊಬ್ಬ ರಹಸ್ಯ ಕ್ಯಾಮರಾ ಇಟ್ಟು ವಿಕೃತಿ ಮರೆದಿದ್ದಾನೆ. ಶೌಚಾಲಯಕ್ಕೆ ತೆರಳಿದ್ದ ಮಹಿಳೆಯರು ಮತ್ತು ಯುವತಿಯರು ಕ್ಯಾಮರಾ ಕಂಡು ಆಘಾತಕ್ಕೊಳಗಾಗಿದ್ದಾರೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳೀಯರು ಕೂಡಲೇ ಕಾರ್ಯಪ್ರವೃತ್ತರಾಗಿದ್ದಾರೆ.

ಕ್ಯಾಮರಾ ಇಟ್ಟಿದ್ದ ಆರೋಪಿಯನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದು, ತನಿಖೆಯನ್ನು ಪ್ರಾರಂಭಿಸಿದ್ದಾರೆ. ಯುವಕ ಯಾರು, ಈ ಕೃತ್ಯದ ಹಿಂದಿನ ಉದ್ದೇಶವೇನು, ಈ ಹಿಂದೆ ಇಂತಹ ಕೃತ್ಯಗಳನ್ನು ನಡೆಸಿದ್ದಾನೆಯೇ ಅಥವಾ ಇದು ಮೊದಲ ಬಾರಿಯೇ ಎಂಬುದರ ಬಗ್ಗೆ ಪೊಲೀಸರು ವಿಚಾರಣೆ ನಡೆಸಲು ಮುಂದಾಗಿದ್ದಾರೆ.

LEAVE A REPLY

Please enter your comment!
Please enter your name here