ದಾವಣಗೆರೆ : ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯಿಂದ ಈಗಾಗಲೇ ವಿವಿಧ ಜಿಲ್ಲೆಗಳ ಶಾಖೆಗಳು ಪ್ರಾರಂಭವಾಗಿದ್ದು ಉತ್ತರ ಕನ್ನಡ ಜಿಲ್ಲೆಯ ಶಿರ್ಶಿಯ ಶಾಖೆಯ ಅಧ್ಯಕ್ಷರಾಗಿ ಬಹುಮುಖ ಪ್ರತಿಭೆ ಆಶಾ ಅರುಣ್ ಪೈ ಅಯ್ಕೆಯಾಗಿದ್ದಾರೆ ಎಂದು ಕಲಾಕುಂಚ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.
ಕಲಾಕುಂಚ ಶಿರ್ಶಿಯ ಶಾಖೆ ಸದ್ಯದಲ್ಲೇ ಉದ್ಘಾಟನೆಯಾಗಲಿದ್ದು, ಕರಾವಳಿ ಜಿಲ್ಲೆಗಳ ಸಾಂಸ್ಕೃತಿಕ ಚಟುವಟಿಕೆಗಳ ಆಸಕ್ತರು ಹೆಚ್ಚನ ಸಂಖ್ಯೆಯಲ್ಲಿ ಸದಸ್ಯರಾಗಿ ಯಕ್ಷಗಾನ ಸೇರಿದಂತೆ, ಎಸ್.ಎಸ್.ಎಲ್.ಸಿ. ಪರೀಕ್ಷೆ ಎದುರಿಸುವ ಮಕ್ಕಳಿಗೆ ಉಚಿತ ಕಾರ್ಯಾಗಾರ, ಕಲೆ, ಸಾಹಿತ್ಯ, ಸಂಗೀತ ವಿವಿಧ ಕ್ಷೇತ್ರಗಳ ಕಲಾ ಪ್ರಕಾರಗಳ ಚಟುವಟಿಕೆ ನಿರಂತರವಾಗಿ ನಡೆಯುತ್ತಿರಲಿ ಎಂದು ಕಲಾಕುಂಚದ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ವಿನಂತಿಸಿದ್ದಾರೆ.

