ಉಡುಪಿ : ಪರ್ಯಾಯ ಮಹೋತ್ಸವದ ಪ್ರಯುಕ್ತ ಪ್ರಸಾದ್ ರಾಜ್ ಕಾಂಚನ್ ಅವರ ನೇತೃತ್ವದಲ್ಲಿ ಹಾಗೂ ಉಡುಪಿ ಜಿಲ್ಲಾ ಬಾಡಿ ಬಿಲ್ಡಿಂಗ್ ಅಸೋಸಿಯೇಷನ್ ಸಹಯೋಗದೊಂದಿಗೆ ಆಯೋಜಿಸಲಾಗಿರುವ “ಮಿಸ್ಟರ್ ಉಡುಪಿ ಕ್ಲಾಸಿಕ್–2026” ದೇಹದಾರ್ಢ್ಯ ಸ್ಪರ್ಧೆಯ ಟ್ರೋಫಿ ಅನಾವರಣ ಕಾರ್ಯಕ್ರಮವು ಉಡುಪಿ ಶ್ರೀ ಕೃಷ್ಣ ಮಠದ ಪವಿತ್ರ ಆವರಣದಲ್ಲಿ ನೆರವೇರಿತು.
ಈ ಶುಭ ಸಂದರ್ಭದಲ್ಲಿ ಪರ್ಯಾಯ ಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರು ಟ್ರೋಫಿಯನ್ನು ಅನಾವರಣಗೊಳಿಸಿ, ಸ್ಪರ್ಧೆ ಯಶಸ್ವಿಯಾಗಿ ನಡೆಯಲೆಂದು ಆಶೀರ್ವಾದ ಹಾಗೂ ಶುಭ ಹಾರೈಕೆಗಳನ್ನು ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಹರಿಪ್ರಸಾದ್ ರೈ ಹಾಗೂ ದಿನಾಕರ್ ಹೇರೂರು ಅವರು ಪ್ರಮುಖ ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದು, ಕ್ರೀಡೆ ಹಾಗೂ ದೇಹದಾರ್ಢ್ಯ ಸ್ಪರ್ಧೆಗಳು ಯುವಜನರಲ್ಲಿ ಆರೋಗ್ಯ ಜಾಗೃತಿ ಹಾಗೂ ಶಿಸ್ತನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಅಭಿಪ್ರಾಯಪಟ್ಟರು.
ಪರ್ಯಾಯ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಈ ದೇಹದಾರ್ಢ್ಯ ಸ್ಪರ್ಧೆ ಉಡುಪಿ ಜಿಲ್ಲೆಯ ಯುವ ಪ್ರತಿಭೆಗಳಿಗೆ ಉತ್ತಮ ವೇದಿಕೆಯಾಗಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ವರದಿ: ವಿನೋದ್ ಶೆಟ್ಟಿ, ಉಡುಪಿ.



