ಮಂಗಳೂರು : ಜ.17 ಮತ್ತು 18ರಂದು – 9ನೇ ಅಂತರರಾಷ್ಟ್ರೀಯ ಗಾಳಿಪಟ ಉತ್ಸವ

0
20

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ ದೇಶದ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ‘ಟೀಮ್ ಮಂಗಳೂರು’ ಹವ್ಯಾಸಿ ಗಾಳಿಪಟ ತಂಡದ ವತಿಯಿಂದ 9ನೇ ಅಂತರರಾಷ್ಟ್ರೀಯ ಗಾಳಿಪಟ ಉತ್ಸವವನ್ನು ಮಂಗಳೂರಿನ ತಣ್ಣೀರುಬಾವಿಯ ನವೀಕರಣಗೊಂಡ ಬ್ಲೂ ಬೇ ಬೀಚ್ನಲ್ಲಿ ಪ್ರಥಮ ಕಾರ್ಯಕ್ರಮವಾಗಿ ಜನವರಿ 17 ಮತ್ತು 18ರಂದು ಆಯೋಜಿಸಲಾಗುತ್ತಿದೆ. ಈ ಉತ್ಸವಕ್ಕೆ ಒಎನ್‌ಜಿಸಿ–ಎಂಆರ್‌ಪಿಎಲ್ ಪ್ರಾಯೋಜಕತ್ವ ವಹಿಸಿದೆ.

ಉತ್ಸವದ ಪೂರ್ವಭಾವಿ ಕಾರ್ಯಕ್ರಮದ ಅಂಗವಾಗಿ ಜನವರಿ 10ರಂದು ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಾನಿಗೆ ಬಣ್ಣದ ತೋರಣ ಕಟ್ಟಲಿರುವ ಗಾಳಿಪಟವನ್ನು ಎತ್ತಿಹಿಡಿದು ಉತ್ಸವಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

ಈ ಗಾಳಿಪಟ ಉತ್ಸವದಲ್ಲಿ 14 ಅಂತರರಾಷ್ಟ್ರೀಯ ಗಾಳಿಪಟ ತಂಡಗಳು ಹಾಗೂ 8 ರಾಷ್ಟ್ರೀಯ ತಂಡಗಳು ಭಾಗವಹಿಸಲಿವೆ. ದೇಶೀಯ ಪರಂಪರೆ ಮತ್ತು ಸಂಸ್ಕೃತಿಯನ್ನು ಬಿಂಬಿಸುವುದರ ಜೊತೆಗೆ ಅಂತರರಾಷ್ಟ್ರೀಯ ಸ್ನೇಹಭಾವವನ್ನು ಬೆಸೆಯುವ ಉದ್ದೇಶದೊಂದಿಗೆ ಸಾರ್ವಜನಿಕರಿಗೆ ಭರಪೂರ ಮನರಂಜನೆ ನೀಡಲು ಈ ಗಾಳಿಪಟ ಉತ್ಸವ ಸಜ್ಜಾಗಿದೆ.

LEAVE A REPLY

Please enter your comment!
Please enter your name here