ದಾವಣಗೆರೆ : ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ 35ನೇ ವರ್ಷದ ವಾರ್ಷಿಕೋತ್ಸವವನ್ನು ಜನವರಿ 18 ರಂದು ಭಾನುವಾರ ಸಂಜೆ 4 ಗಂಟೆಗೆ ಕಲಾಕುಂಚ ಕಛೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಲಾಕುಂಚದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.
ಸಮಾರಂಭದ ಉದ್ಘಾಟನೆಯನ್ನು ಅಂಚೆ ಇಲಾಖೆಯ ದಾವಣಗೆರೆ ಜಿಲ್ಲೆಯ ಅಧೀಕ್ಷಕರಾದ ಚಂದ್ರಶೇಖರ್ ನೆರವೇರಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಕಲಾಕುಂಚದ ಅಧ್ಯಕ್ಷರಾದ ಕೆ.ಹೆಚ್.ಮಂಜುನಾಥ್ ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಾ|| ಶಾಂತಾ ಶ್ರೀಪಾದ್ ಭಟ್, ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕರಾದ ಜ್ಯೋತಿ ಗಣೇಶ್ ಶೆಣೈ, ಕಲಾಕುಂಚ ಮಹಿಳಾ ವಿಭಾಗದ ಅಧ್ಯಕ್ಷರಾದ ಹೇಮಾ ಶಾಂತಪ್ಪ ಪೂಜಾರಿ, ಗೌರವ ಅಧ್ಯಕ್ಷರಾದ ವಸಂತಿ ಮಂಜುನಾಥ್ ಆಗಮಿಸಲಿದ್ದಾರೆ.
ಸಾರ್ವಜನಿಕವಾಗಿ ಉಚಿತ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಗುವುದು. ಕಲಾಕುಂಚದ 35ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವನ್ನು ಯಶಸ್ವಿಗೊಳಿಸಬೇಕಾಗಿ ಕಲಾಕುಂಚ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ವಿನಂತಿಸಿದ್ದಾರೆ.

