ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಜ.12 ರಂದು ಇಂಟರಾಕ್ಟ್ ಕ್ಲಬ್ ಸಹಯೋಗದೊಂದಿಗೆ ರಾಷ್ಟ್ರೀಯ ಯುವ ದಿನ ಆಚರಿಸಲಾಯಿತು. ಸ್ವಾಮಿ ವಿವೇಕಾನಂದರ ಕುರಿತು 9ನೇ ತರಗತಿ ವಿದ್ಯಾರ್ಥಿನಿಯರಾದ ಸುಷ್ಮಾ ಭಾಷಣ ಮಾಡಿದರು ಹಾಗೂ ಪವಿತ್ರಾ ವಿವೇಕಾನಂದರ ಸಂದೇಶಗಳನ್ನು ವಾಚಿಸಿದರು. 8ನೇ ತರಗತಿ ವಿದ್ಯಾರ್ಥಿನಿಯರು ಸ್ವಾಮಿ ವಿವೇಕಾನಂದರು ರಚಿಸಿದ ವೀರ ಸನ್ಯಾಸಿ ಗೀತೆ ಹಾಡಿದರು. ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ವಿವೇಕಾನಂದರ ಜೀವನ, ಚಿಂತನೆಗಳನ್ನು ತಿಳಿಸಿದರು. ಶಿಕ್ಷಕ ಕಿರಣ್ ಕಾರ್ಯಕ್ರಮ ನಿರ್ವಹಿಸಿದರು.

