ಬೆಳ್ತಂಗಡಿ : ಕೆರೆಯಲ್ಲಿ ಬಾಲಕನ ಶವ ಪತ್ತೆ

0
61

ದೇವಸ್ಥಾನಕ್ಕೆ ಧನು ಪೂಜೆಗೆಂದು ಹೋದ ಬಾಲಕನೋರ್ವ ನಿಗೂಢವಾಗಿ,ನಾಪತ್ತೆಯಾದ ಮತ್ತು ಬಳಿಕ ಮನೆಯ ಸಮೀಪದ ಕೆರೆಯಲ್ಲಿ ಆತನ ಮೃತದೇಹ ಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಬಳಿ ನಡೆದಿದೆ.

ಮೃತದೇಹದ ಮೇಲೆ ಗಾಯಗಳಿದ್ದು ಈ ಹಿನ್ನೆಲೆಯಲ್ಲಿ ಬಾಲಕನ ಸಾವಿನ ಕುರಿತು ಅನುಮಾನಗಳು ಕೂಡಾ ವ್ಯಕ್ತವಾಗಿದೆ.ಮೃತ ಬಾಲಕನನ್ನು ಗೇರುಕಟ್ಟೆ ಪ್ರೌಢ ಶಾಲೆಯ ವಿದ್ಯಾರ್ಥಿ ಸುಮಂತ್(15.ವ) ಎಂದು ಗುರುತಿಸಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಹಾಗೂ ಇತರ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದು , ಪರಿಶೀಲನೆ ನಡೆಸಿದ್ದಾರೆ. ತನಿಖೆ ಮುಂದುವರಿದಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here