ಬೆಳ್ತಂಗಡಿ ತಾಲೂಕಿನ ಕಾಶಿಪಟ್ಟನ ಗ್ರಾಮದ ಕಲ್ತೊಟ್ಟು ನಿವಾಸಿಯಾದ ಕಾಂತಪ್ಪ ಪೂಜಾರಿ ಇವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲ ಫಲಾನುಭವಿಯಾಗಿ ,ಕೃಷಿ ಹಾಗೂ ಉದ್ಯಮ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ಗುರುವನಕೆರೆ – ಹೊಸಂಗಡಿ ವಲಯದಲ್ಲಿ ಒಂಬತ್ತು ವರ್ಷಗಳ ಕಾಲ ಒಕ್ಕೂಟದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಅವರು, ಪ್ರಗತಿ ಬಂಧು ಗುಂಪಿನ ಸಕ್ರಿಯ ಸದಸ್ಯರಾಗಿದ್ದಾರೆ.
ತಮ್ಮ ಸ್ವಂತ ಕೃಷಿ ಭೂಮಿಯಲ್ಲಿ ಅಡಿಕೆ, ತೆಂಗು, ಬಾಳೆ, ಕರಿಮೆಣಸು, ಜೇನು ಸಾಕಾಣಿಕೆ, ಹಂದಿ ಸಾಕಾಣಿಕೆ, ಭತ್ತ ಕೃಷಿ ಹಾಗೂ ಹೈನುಗಾರಿಕೆ ಸೇರಿದಂತೆ ವಿವಿಧ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಯಶಸ್ವಿ ಕೃಷಿಕರಾಗಿ ಗುರುತಿಸಿಕೊಂಡಿದ್ದಾರೆ. ಇದಲ್ಲದೆ ಉದ್ಯಮ ಕ್ಷೇತ್ರದಲ್ಲಿಯೂ ಮುಂದಾಳತ್ವ ವಹಿಸಿ ಹೋಲೋ ಬ್ಲಾಕ್ ತಯಾರಿಕಾ ಘಟಕವನ್ನು ಪ್ರಾರಂಭಿಸಿ ಉತ್ತಮ ವ್ಯವಹಾರ ನಡೆಸುತ್ತಿದ್ದಾರೆ.
ಈ ಸಾಧನೆಯನ್ನು ಗುರುತಿಸಿ ಕರ್ನಾಟಕ ಪ್ರದೇಶ ಕೃಷಿಕ ಸಮಾಜ ಬೆಂಗಳೂರು, ಜಿಲ್ಲಾ ಕೃಷಿಕ ಸಮಾಜ ದಕ್ಷಿಣ ಕನ್ನಡ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ಧರ್ಮಸ್ಥಳ ಹಾಗೂ ಸುದ್ದಿ ಅರಿವು ಕೇಂದ್ರ ಪುತ್ತೂರು ಇವರ ಸಹಯೋಗದಲ್ಲಿ ಜನವರಿ 2026ರಲ್ಲಿ ಪುತ್ತೂರು ಮಹಾತೋಭಾರ ದೇವಸ್ಥಾನ ಜಾತ್ರಾ ಗದ್ದೆಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಕೃಷಿ ಮೇಳ ಹಾಗೂ ಸಸ್ಯ ಜಾತ್ರೆ ಕಾರ್ಯಕ್ರಮದಲ್ಲಿ ಅತ್ಯುತ್ತಮ ಕೃಷಿ ಸಾಧಕ ಪುರಸ್ಕಾರ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಗುರುವಾಯನಕೆರೆ ಮಾನ್ಯ ಯೋಜನಾಧಿಕಾರಿಗಳು ಅಶೋಕ್, ವಲಯ ಮೇಲ್ವಿಚಾರಕಿ ವೀಣಾ, ಕೃಷಿ ಮೇಲ್ವಿಚಾರಕರು ಕೃಷ್ಣ, ಸೇವಾ ಪ್ರತಿನಿಧಿಗಳು, ಹೊಸಂಗಡಿ ವಲಯದ ಒಕ್ಕೂಟ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದು ಅಭಿನಂದನೆ ಸಲ್ಲಿಸಿದರು. ಮುಂದಿನ ದಿನಗಳಲ್ಲಿ ಇನ್ನಷ್ಟು ಕೃಷಿ ಸಾಧನೆ ಮಾಡುವ ಶಕ್ತಿಯನ್ನು ಮಂಜುನಾಥ ಸ್ವಾಮಿ ಕರುಣಿಸಲಿ ಎಂದು ಶುಭ ಹಾರೈಸಿದರು.

