ಉದ್ಯಾವರ ಟ್ರಿನಿಟಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮ

0
2

ಟ್ರಿನಿಟಿ ಕೈಗಾರಿಕಾ ತರಬೇತಿ ಸಂಸ್ಥೆ ಉದ್ಯಾವರ ಇದರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಉಡುಪಿ ತಾಲೂಕು ಜನ ಜಾಗೃತಿ ವೇದಿಕೆ ಅಂಬಲಪಾಡಿ ವಲಯದ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನೆರವೇರಿತು.

ಟ್ರಿನಿಟಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಜಾನ್ ಎಮ್. ಡಿ’ಸೋಜಾ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ಸುಂದರ್ ಜೆ. ಕಲ್ಮಾಡಿ ಅವರು ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಉಡುಪಿ ಪ್ರಾದೇಶಿಕ ಯೋಜನಾಧಿಕಾರಿ ಗಣೇಶ್ ಆಚಾರ್ಯ ಅವರು ದುಶ್ಚಟಗಳ ದುಷ್ಪರಿಣಾಮಗಳ ಕುರಿತು ವಿಸ್ತೃತ ಮಾಹಿತಿ ನೀಡಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಉಡುಪಿ ಜಿಲ್ಲಾ ಸಮಿತಿ ಸದಸ್ಯ ಶಿವಕುಮಾರ್ ಅಂಬಲಪಾಡಿ, ತಾಲೂಕು ಸಮಿತಿ ಸದಸ್ಯ ಪ್ರತಾಪ್ ಕುಮಾರ್ ಉದ್ಯಾವರ, ಯೋಜನೆಯ ತಾಲೂಕು ಕೃಷಿ ಅಧಿಕಾರಿ ಮಂಜುನಾಥ್ ಅವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

ಟ್ರಿನಿಟಿ ಕೈಗಾರಿಕಾ ತರಬೇತಿ ಸಂಸ್ಥೆಯ ಉಪನ್ಯಾಸಕರಾದ ಪ್ರದೀಪ್ ಅವರು ಸ್ವಾಗತಿಸಿ, ಪ್ರಸನ್ನ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಯೋಜನೆಯ ಸೇವಾ ಪ್ರತಿನಿಧಿ ಜಯಶ್ರೀ ವಂದಿಸಿದರು.

LEAVE A REPLY

Please enter your comment!
Please enter your name here