ವರದಿ ರಾಯಿ ರಾಜ ಕುಮಾರ
ರೈಲ್ವೆ ನಿಲ್ದಾಣಗಳ ಮೇಲ್ದರ್ಜೆಗಾಗಿ ಮುಂದಿನ ದಿನಗಳಲ್ಲಿ ಎಲ್ಲ ರೀತಿಯ ಕಾಮಗಾರಿಗಳನ್ನು ಜಾರಿಗೊಳಿಸಿ ಬ್ಲಾಟ್ ಫಾರ್ಮ್ ಅನ್ನು ನವೀಕರಣಗೊಳಿಸಲಾಗುತ್ತದೆ. ಪ್ಲಾಟ್ ಫಾರ್ಮ್ ನವೀಕರಣಕ್ಕಾಗಿ ಸಾಕಷ್ಟು ಹಣವನ್ನು ತೆಗೆದಿರಿಸಲಾಗಿದ್ದು ಈ ಸಂದರ್ಭದಲ್ಲಿ ಹಿರಿಯ ನಾಗರಿಕರ ಅನುಕೂಲಕ್ಕಾಗಿ ಲಿಫ್ಟ್ಳನ್ನು ಅಳವಡಿಸುವ ಕಾರ್ಯ ಕೈಗೊಳ್ಳಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಮಂಗಳೂರಿನಿಂದ ಕಾರವಾರದವರೆಗೆ ದ್ವಿಪಥ ರೈಲ್ವೆ ಹಳಿಗಳು ಈಗಿನ ಆವಶ್ಯಕತೆಯಾಗಿದ್ದು, ಅದಕ್ಕಾಗಿ ವಿಸ್ತ್ರತ ಯೋಜನಾ ವರದಿಯನ್ನು ಕೇಂದ್ರ ಸಚಿವರಿಗೆ ಸಲ್ಲಿಸಲಾಗುವುದು. ಜೊತೆಗೆ ಮಡಗಾಂವ್- ಮಂಗಳೂರು ವಂದೇ ಭಾರತ್ ರೈಲನ್ನು ಮುಂಬೈ ವರೆಗೆ ಮತ್ತು ಬೆಂಗಳೂರು-ಮಂಗಳೂರು ರೈಲನ್ನು ಕಾರವಾರದವರೆಗೆ ವಿಸ್ತರಣೆ ಮಾಡಿದಲ್ಲಿ , ಕರಾವಳಿಯ ಜನರಿಗೆ ಬಹಳ ಅನುಕೂಲವಾಗಲಿದ್ದು, ಈ ನಿಟ್ಟಿನಲ್ಲಿ ಕೊಂಕಣ ರೈಲ್ವೆಯೊಂದಿಗೆ ಸಮಾಲೋಚಿಸಿ ಅಡಚಣೆ ನಿವಾರಿಸುವ ಹಾಗೂ ಉಡುಪಿ ರೈಲು ನಿಲ್ದಾಣಕ್ಕೆ ಶ್ರೀಕೃಷ್ಣ ರೈಲು ನಿಲ್ದಾಣ ಎಂದು ಹೆಸರಿಸಲು ಪ್ರಸ್ತಾಪ ಸಲ್ಲಿಸಲಾಗುವುದು ಎಂದರು.
ಬಾರ್ಕೂರು- ಮೂಲ್ಕಿ ರೈಲ್ವೆ ಪ್ಲಾಟ್ ಫಾರ್ಮ್’ಗಳನ್ನು 4.28 ಕೋ. ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ಪ್ರಸಕ್ತ ಆರ್ಥಿಕ ಸಾಲಿನಲ್ಲಿ 105 ಕೋ. ರೂ. ವೆಚ್ಚದಲ್ಲಿ 10 ರೈಲು ನಿಲ್ದಾಣಗಳ ಅಭಿವೃದ್ಧಿ ಕಾಮಗಾರಿಗೆ ಕೇಂದ್ರದಿಂದ ಅನುಮೋದನೆ ದೊರೆಯಲಿದೆ ಎಂದರು.

