ನಗರ ವಿದ್ಯುದ್ದೀಪಾಲಂಕಾರ ಉದ್ಘಾಟನೆ

0
69

ಉಡುಪಿ : ಮೊದಲ ಬಾರಿಗೆ ಪರ್ಯಾಯ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇನೆ. ಸಿಂಗಾರಗೊಂಡ ನಗರ, ಪರ್ಯಾಯದ ಸಿದ್ಧತೆಗಳು ಅತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿರುವುದು ಸಂತೋಷವಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದರು.

ಕೋರ್ಟ್​ ರಸ್ತೆಯ ಕೆನರಾ ಬ್ಯಾಂಕ್​ ಮುಂಭಾಗದಲ್ಲಿ ಶೀರೂರು ಪರ್ಯಾಯ ಹಿನ್ನೆಲೆಯಲ್ಲಿ ವಿದ್ಯುತ್​ ದೀಪಾಲಂಕಾರ ಉದ್ಘಾಟಿಸಿ ಮಾತನಾಡಿದರು.

ಸ್ವಾಗತ ಸಮಿತಿ ಅಧ್ಯಕ್ಷ ಶಾಸಕ ಯಶ್​ ಪಾಲ್​ ಸುವರ್ಣ ಮಾತನಾಡಿ, ಪರ್ಯಾಯ ಕಾರ್ಯಕ್ರಮಕ್ಕೆ ಹೆಚ್ವಿನ ಮೆರುಗು ನೀಡಲು ಈ ಬಾರಿ ವಿಶೇಷ ವಿದ್ಯುದ್ದೀಪಾಲಂಕಾರ ಮಾಡಲಾಗಿದೆ. ನಗರ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಇದರ ಮೆರುಗು ಹೆಚ್ಚಿಸಲು ಈ ಬಾರಿ ಉಡುಪಿ ನಗರಸಭೆ ಅನುದಾನದೊಂದಿಗೆ 50ಲಕ್ಷ ರೂಪಾಯಿ ವೆಚ್ಚದಲ್ಲಿ ವಿದ್ಯುತ್​ ದೀಪಾಲಂಕಾರ ಮಾಡಲಾಗಿದೆ ಎಂದರು.

ಕೆನರಾಬ್ಯಾಂಕ್​ ಜಿ.ಎಂ ಗಂಗಾಧರ್​, ನಗರಸಭೆ ಆಯುಕ್ತ ಮಹಾಂತೇಶ್​, ನಗರ ಸಭೆ ನಿಕಟಪೂರ್ವ ಅಧ್ಯಕ್ಷ ಪ್ರಭಾಕರ್​ ಪೂಜಾರಿ, ರಜನಿ ಹೆಬ್ಬಾರ್​, ಬಿಜೆಪಿ ಜಿಲ್ಲಾಧ್ಯಕ್ಷ ನವೀನ್​ ಶೆಟ್ಟಿ ಕುತ್ಯಾರ್​, ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಮಟ್ಟಾರ್​ ರತ್ನಾಕರ್​ ಹೆಗ್ಡೆ, ಮಹಿಳಾ ಘಟಕದ ಪದ್ಮಲತಾ, ನಗರಸಭಾ ಸದಸ್ಯ ಬಾಲಕೃಷ್ಣ್ಣ ಶೆಟ್ಟಿ, ಪ್ರಚಾರ ಸಮಿತಿ ಸಂಚಾಲಕ ನಂದನ್​ ಜೈನ್​ , ವಿಷ್ಣು ಮೂರ್ತಿ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here