ದಾವಣಗೆರೆ : ಅಖಿಲ ಭಾರತ ವೀರಶೈವ ಮಹಾಸಭಾದ ಮಾಜಿ ಅಧ್ಯಕ್ಷರು, ಜನಪರ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಶತಾಯುಷಿ ಮಾಜಿ ಸಚಿವರಾದ ಭೀಮಣ್ಣ ಖಂಡ್ರೆ ಅವರ ನಿಧನಕ್ಕೆ ಕರ್ನಾಟಕ ಜನಮನ ವೇದಿಕೆ ಹೃತ್ಪೂರ್ವಕ ಶ್ರದ್ಧಾಂಜಲಿ ಸಲ್ಲಿಸಿದೆ ಎಂದು ವೇದಿಕೆಯ ಉಪಾಧ್ಯಕ್ಷ ಬಿ.ಎಸ್. ಪ್ರವೀಣ್ ಪಲ್ಲೇದ್ ತಿಳಿಸಿದ್ದಾರೆ.
ನಾಲ್ಕು ಬಾರಿ ವಿಧಾನಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ಭೀಮಣ್ಣ ಖಂಡ್ರೆ ಅವರು, ಕರ್ನಾಟಕ ಸರ್ಕಾರದ ಸಚಿವರಾಗಿ ಸೇವೆ ಸಲ್ಲಿಸಿ ಜನಸಾಮಾನ್ಯರ ಹಿತಕ್ಕಾಗಿ ದುಡಿದ ಜನನಾಯಕನಾಗಿದ್ದರು. ವೀರಶೈವ ಸಮುದಾಯದ ಹಿರಿಯ ಹಾಗೂ ಗಣ್ಯ ನಾಯಕನಾಗಿ ಸಮುದಾಯದ ಸಂಘಟನೆ ಮತ್ತು ಏಳ್ಗೆಗಾಗಿ ಅವಿರತವಾಗಿ ಶ್ರಮಿಸಿದವರು ಎಂಬುದಾಗಿ ಅವರು ಸ್ಮರಿಸಿದರು.
ಭೀಮಣ್ಣ ಖಂಡ್ರೆ ಅವರ ನಿಧನವು ರಾಜ್ಯ ರಾಜಕೀಯ, ಸಾಮಾಜಿಕ ಹಾಗೂ ವೀರಶೈವ ಸಮುದಾಯಕ್ಕೆ ಅಪಾರ ನಷ್ಟವಾಗಿದೆ. ಅವರ ದಿವ್ಯಾತ್ಮಕ್ಕೆ ಸದ್ಗತಿ ದೊರಕಲಿ ಹಾಗೂ ದೇಶಾದ್ಯಂತ ಇರುವ ಅವರ ಅಭಿಮಾನಿಗಳು ಮತ್ತು ಕುಟುಂಬ ವರ್ಗಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ದೇವರು ನೀಡಲಿ ಎಂದು ಕರ್ನಾಟಕ ಜನಮನ ವೇದಿಕೆ ಪ್ರಾರ್ಥಿಸಿದೆ.
ಜನಪರ ಸೇವೆ, ನಿಷ್ಠೆ ಮತ್ತು ಸರಳ ಜೀವನಶೈಲಿಯಿಂದ ಗುರುತಿಸಿಕೊಂಡಿದ್ದ ಭೀಮಣ್ಣ ಖಂಡ್ರೆ ಅವರ ಕೊಡುಗೆ ಸದಾ ಸ್ಮರಣೀಯವಾಗಿರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

