ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

0
46

ಬಂಟ್ವಾಳ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ 2025ರ ಡಿಸೆಂಬರ್ ತಿಂಗಳಲ್ಲಿ ನಡೆಸಲಾದ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆ, ವಿದ್ಯಾಗಿರಿ, ಬಂಟ್ವಾಳ ಶೇ.100 ಫಲಿತಾಂಶ ಸಾಧಿಸಿ ಗಮನಾರ್ಹ ಸಾಧನೆ ಮಾಡಿದೆ.

ಪರೀಕ್ಷೆಗೆ ಹಾಜರಾದ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಶಾಲೆಯ ಶೈಕ್ಷಣಿಕ ಹಾಗೂ ಸಹಪಠ್ಯ ಚಟುವಟಿಕೆಗಳ ಗುಣಮಟ್ಟವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

ಅತ್ಯುತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳ ವಿವರ ಹೀಗಿದೆ :
ಸ್ಪಂದನ ಜೆ. ಶೆಟ್ಟಿ – 492 ಅಂಕ, ವೈಷ್ಣವಿ ಎಸ್. ಭಟ್ – 477, ರಿಧಾ ನಫೀಸ ಹಲ್ಯರ್ – 475, ವಿದಿಶ್ ಸಿ.ಕೆ – 467, ಜೋಶಲ್ ಡಿ’ಸೋಜ – 457, ಶಿವಾನಿ – 456, ದೇವಾನ್ಶ್ – 454, ಪ್ರಣವಿ ಪಿ. ಸುವರ್ಣ – 454, ಮನ್ವಿತ್ ಕುಮಾರ್ ಎಸ್. – 450 ಹಾಗೂ ಸುಸಾನ್ ಸಾರ್ವ ವಿ. – 443 ಅಂಕಗಳನ್ನು ಪಡೆದುಕೊಂಡಿದ್ದಾರೆ.

ಈ ಸಾಧನೆಗೆ ಶಾಲಾ ಸಂಚಾಲಕರಾದ ಕೆ. ರೇಖಾ ಶೆಣೈ, ಮುಖ್ಯ ಶಿಕ್ಷಕರಾದ ಶ್ರೀ ಹರಿಪ್ರಸಾದ್, ಶಿಕ್ಷಕಿಯರಾದ ಶ್ರೀಮತಿ ಚೈತ್ರಾ ಶೆಟ್ಟಿ ಮತ್ತು ಶ್ರೀಮತಿ ವೀಣಾ ದೇವಾಡಿಗ ಅವರು ವಿದ್ಯಾರ್ಥಿಗಳಿಗೆ ಹಾರ್ದಿಕ ಅಭಿನಂದನೆಗಳನ್ನು ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಈ ಯಶಸ್ಸಿಗೆ ಚಿತ್ರಕಲಾ ಶಿಕ್ಷಕರಾದ ರಾಜೇಂದ್ರ ನಾಯಕ್ ಅವರ ಮಾರ್ಗದರ್ಶನ ಮತ್ತು ಶ್ರಮ ಪ್ರಮುಖ ಕಾರಣವಾಗಿದೆ ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ.

LEAVE A REPLY

Please enter your comment!
Please enter your name here