ಮುಲ್ಕಿ : ಇಲ್ಲಿಗೆ ಸಮೀಪದ ಶಿಮಂತೂರು ದೇವಸ್ಥಾನದ ಬಳಿಯ ನಿವಾಸಿ ಖ್ಯಾತ ಜ್ಯೋತಿಷಿ ದಿ. ರಾಮಚಂದ್ರ ಭಟ್ ರವರ ದ್ವಿತೀಯ ಪುತ್ರ ಜಗದೀಶ್ ಭಟ್(47) ಹೃದಯಾಘಾತದಿಂದ ಜ.20 ಮಂಗಳವಾರ ಸಂಜೆ ನಿಧನರಾದರು, ಅವರು ಪತ್ನಿ ಹಾಗೂ ಓರ್ವ ಪುತ್ರ,ಪುತ್ರಿಯನ್ನು ಅಗಲಿದ್ದಾರೆ.
ಪುರೋಹಿತ ವೃತ್ತಿಯಿಂದ ಮಂಗಳೂರು, ಬೆಂಗಳೂರು,ಮುಂಬೈ ಸಹಿತ ದೇಶ ಹಾಗೂ ವಿದೇಶಗಳಲ್ಲಿ ಸೇವೆ ಸಲ್ಲಿಸಿ ಸೌಮ್ಯ ಭಾವದ ವ್ಯಕ್ತಿತ್ವದ ಮೂಲಕ ಜನಾನುರಾಗಿಯಾಗಿದ್ದರು ಅವರ ನಿಧನಕ್ಕೆ ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ಶಾಸಕ ಉಮಾನಾಥ ಕೋಟ್ಯಾನ್,ಮಾಜೀ ಸಚಿವ ಅಭಯ ಚಂದ್ರ ಜೈನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಕ.ಸಾ. ಪ ಮಾಜೀ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ ಹರಿಕೃಷ್ಣ ಪುನರೂರು,ಶಿಮಂತೂರು ಶ್ರೀ ಆದಿಜನಾರ್ಧನ ದೇವಸ್ಥಾನದ ತಂತ್ರಿಗಳಾದ ಶಿಬರೂರು ವೇದವ್ಯಾಸ ತಂತ್ರಿ,ಆಡಳಿತ ಮೊಕ್ತೇಸರ ಉದಯಕುಮಾರ್ ಶೆಟ್ಟಿ,ಮಾಜೀ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಬಾಬಾ ರಂಜನ್ ಶೆಟ್ಟಿ ಮಜಲಗುತ್ತು,,ಮೋಹನ್ ಕೋಟ್ಯಾನ್ ಶಿಮಂತೂರು,ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು ಉದಯ ಕುಮಾರ್ ಶೆಟ್ಟಿ ಅಧಿಧನ್ ಮುಲ್ಕಿ ವಿಜಯಾ ರೈತ ಸೊಸೈಟಿ, ಅಧ್ಯಕ್ಷ ರಂಗನಾಥ ಶೆಟ್ಟಿ ಮುಲ್ಕಿ ಬಿಲ್ಲವ ಸಂಘದ ಮಾಜೀ ಅಧ್ಯಕ್ಷ ಗೋಪಿನಾಥ ಪಡಂಗ,ಅತಿಕಾರಿಬೆಟ್ಟು ಗ್ರಾಪಂ ಉಪಾಧ್ಯಕ್ಷ ಮನೋಹರ ಕೋಟ್ಯಾನ್,ಸದಸ್ಯೆ ಪದ್ಮಿನಿ ವಿಜಯಕುಮಾರ್ ಶೆಟ್ಟಿ ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

