ಬ್ರಹ್ಮಾವರ: ಭೀಕರ ರಸ್ತೆ ಅಪಘಾತ – ಟ್ರಕ್ ನ ಚಕ್ರದಡಿ ಸಿಲುಕಿ ದ್ವಿಚಕ್ರ ವಾಹನ ಸವಾರ ಮೃತ್ಯು

0
128

ಉಡುಪಿ: ಟ್ರಕ್ ನ ಚಕ್ರದಡಿ ಸಿಲುಕಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಪ್ಪೂರು ಕೆ.‌ಜಿ ರೋಡ್ ಬಳಿ ಶುಕ್ರವಾರ ಬೆಳಿಗ್ಗೆ ನಡೆದಿದೆ.

ಮೃತ ಸವಾರ‌ನನ್ನು ಬ್ರಹ್ಮವಾರ ಮಟಪಾಡಿಯ ನಿವಾಸಿ ಅಭಿಷೇಕ್ (25) ಎಂದು ಗುರುತಿಸಲಾಗಿದ್ದು, ಇವರು‌ ವಿದ್ಯೋದಯ ಪಬ್ಲಿಕ್ ಸ್ಕೂಲ್ ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಚಕ್ರದಡಿಗೆ ಸಿಲುಕಿದ ಪರಿಣಾಮ ಬೈಕ್ ಸವಾರನ ದೇಹವು ಛಿದ್ರಗೊಂಡಿದ್ದು ,ಘಟನಾ ಸ್ಥಳದಲ್ಲಿದ್ದು ಬ್ರಹ್ಮಾವರ ಆರಕ್ಷಕ ಠಾಣೆಯ‌ ಮುಖ್ಯ ಆರಕ್ಷಕ ಮಹಾಲಿಂಗ ಮಹಜರು ಪ್ರಕ್ರಿಯೆ ನಡೆಸಿದರು. ಶವತೆರವು ಹಾಗೂ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು,‌ ಮತ್ತು ಬ್ರಹ್ಮಾವರದ ಅಂಬುಲೆನ್ಸ್ ಚಾಲಕ ನೆರವಾದರು.

LEAVE A REPLY

Please enter your comment!
Please enter your name here