ಬಂಟ್ವಾಳ : ಇಲ್ಲಿನ ಪುರಸಭಾ ವ್ಯಾಪ್ತಿಯ ಭಂಡಾರಿಬೆಟ್ಟು ಯುವಜನ ವ್ಯಾಯಾಮ ಶಾಲೆ ಇದರ ಸುವರ್ಣ ಮಹೋತ್ಸವ ಪ್ರಯುಕ್ತ ಜ.24ರಿಂದ 25ರತನಕ ‘ಸುವರ್ಣ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ.
ಜ.24ರಂದು ಬೆಳಿಗ್ಗೆ 7 ಗಂಟೆಗೆ ಗಣಯಾಗ, 10 ಗಂಟೆಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.
ಸಂಜೆ ಗಂಟೆ 4.30ರಿಂದ ಈ ವ್ಯಾಯಾಮ ಶಾಲೆಯಲ್ಲಿ ಕಳೆದ 36 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಸಂಜೆ ಗಂಟೆ 5.30ಕ್ಕೆ ಸಭಾ ಕಾರ್ಯಕ್ರಮ ಮತ್ತು 7 ಗಂಟೆಗೆ ಮೈಸೂರು ರಾಮಚಂದ್ರಾಚಾರ್ಯ ಇವರಿಂದ ‘ಹರಿನಾಮ ಸಂಕೀರ್ತನೆ’ ನಡೆಯಲಿದೆ.
ಜ.25ರಂದು ಬೆಳಿಗ್ಗೆ ಗಂಟೆ 7ರಿಂದ ‘ಶ್ರೀರಾಮ ನಾಮ ತಾರಕ ಜಪ ಯಜ್ಞ ಆರಂಭಗೊAಡು, 11.30ಕ್ಕೆ ಪೂರ್ಣಾಹುತಿಗೊಳ್ಳಲಿದೆ. ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ, ಮಧ್ಯಾಹ್ನ 2 ಗಂಟೆಗೆ ಭಜನೆ, ಸಂಜೆ 5 ಗಂಟೆಗೆ ಸಭಾ ಕಾರ್ಯಕ್ರಮ ಹಾಗೂ ಸಂಜೆ ಗಂಟೆ 7.30ಕ್ಕೆ ‘ಜೋಡು ಜೀಟಿಗೆ’ ತುಳು ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಜಗದೀಶ ಕುಂದರ್ ತಿಳಿಸಿದ್ದಾರೆ.
