ಬಂಟ್ವಾಳ : ಉಡುಪಿ ಪರ್ಯಾಯ ಸಂದರ್ಭದಲ್ಲಿ ಅಲ್ಲಿನ ಜಿಲ್ಲಾಧಿಕಾರಿ ಕೇಸರಿ ಭಗವಾಧ್ವಜ ಹಾರಾಟ ನಡೆಸಿರುವ ಬಗ್ಗೆ ಹಲವರಿಂದ ಆಕ್ಷೇಪ ಕೇಳಿ ಬಂದ ಹಿನ್ನೆಲೆಯಲ್ಲಿ ಮಾತ್ರ ನಾನು ಪ್ರತಿಕ್ರಿಯೆ ನೀಡಿದ್ದೇನೆಯೇ ವಿನಃ ಬೇರೆ ಯಾವುದೇ ದೇವಸ್ಥಾನಗಳಲ್ಲಿ ಕೇಸರಿ ಧ್ವಜ ಹಾರಾಟಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿಲ್ಲ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಸ್ಪಷ್ಟನೆ ನೀಡಿದ್ದಾರೆ.
ಸರ್ಕಾರಿ ಸಿಬ್ಬಂದಿಗಳು ಅಥವಾ ಜವಾಬ್ದಾರಿಯುತ ಅಧಿಕಾರಿಗಳು ಯಾವುದೇ ಧರ್ಮದ ಬಾವುಟಗಳನ್ನು ಹಾರಾಟ ಮಾಡುವುದು ಸರಿಯಲ್ಲ ಎಂದು ಹೇಳಿರುವುದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
