ಬೈಕ್ ಸವಾರನೊಬ್ಬ ಖಾಸಗಿ ಬಸ್ ಒಂದನ್ನು ಓವರ್ ಟೆಕ್ ಮಾಡುವ ಬರದಲ್ಲಿ ಎದುರಿಗೆ ಬಂದ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನಪ್ಪಿದ ಘಟನೆ ನೇರಳಕಟ್ಟೆಯ ಶೆಟ್ರಕಟ್ಟೆ ಜಂಕ್ಷನ್‌ನಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.
ಜಮೃತರನ್ನು ಸೌಕೂರು ನಿವಾಸಿ ವಿಜಯ್ ದೇವಾಡಿಗ ಎಂದು ಗುರುತಿಸಲಾಗಿದೆ. ತ್ರಾಸಿಯಲ್ಲಿ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿದ್ದ ವಿಜಯ್, ತ್ರಾಸಿಯಿಂದ ಸೌಕೂರು ಕಡೆಗೆ ತನ್ನ ಬೈಕ್ ನಲ್ಲಿ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಶೆಟ್ರಕಟ್ಟೆ ಜಂಕ್ಷನ್‌ನಲ್ಲಿ ಖಾಸಗಿ ಬಸ್ ಅನ್ನು ಹಿಂದಿಕ್ಕಲು ಪ್ರಯತ್ನಿಸುತ್ತಿದ್ದಾಗ, ವಿಜಯ್ ಎದುರು ಬರುತ್ತಿದ್ದ ಖಾಸಗಿ ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದ್ದಾನೆ.
ಅಪಘಾತದ ದೃಶ್ಯ ಖಾಸಗಿ ಬಸ್ ನ ಡ್ಯಾಶ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

