ನೆಲಮಂಗಲ : ಡಿ ಮಾರ್ಟ್ಗೆ ಹೋಗಿ ಬರುತ್ತಿದ್ದ ತಾಯಿ ಮತ್ತು ಮಗ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗುಂಡೇನಹಳ್ಳಿ ಗೇಟ್ ಬಳಿ ಸಂಭವಿಸಿದೆ. ಶೈಲಜಾ(45), ಪ್ರಜ್ವಲ್(26) ಮೃತ ತಾಯಿ, ಮಗ.
ತಾಯಿ ಮತ್ತು ಮಗ ಡಿ ಮಾರ್ಟ್ಗೆ ಹೋಗಿ ದಿನಸಿ ಸಾಮಗ್ರಿಗಳನ್ನು ತೆಗೆದುಕೊಂಡು ಮನೆಗೆ ವಾಪಸ್ ಆಗುತ್ತಿದ್ದರು. ಈ ವೇಳೆ ನೆಲಮಂಗಲ ತಾಲೂಕಿನ ಗುಂಡೇನಹಳ್ಳಿ ಗೇಟ್ ಬಳಿ ವೇಗವಾಗಿ ಬಂದ ಟಾಟಾ ಏಸ್ ವಾಹನ ತಾಯಿ, ಮಗ ಇದ್ದ ಬೈಕ್ಗೆ ಡಿಕ್ಕಿ ಹೊಡೆದಿ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತ್ಯಾಮಗೊಂಡ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

