ಕಲ್ಲಡ್ಕ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭ ಇಲ್ಲಿ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು. ವೀರಕಂಭ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜನಾರ್ಧನ ಪೂಜಾರಿ ಗೋಳಿಮಾರು ಧ್ವಜಾರೋಹಣ ನಡೆಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶಾಲಾ ವಿದ್ಯಾರ್ಥಿಗಳಿಂದ ಶಾರೀರಿಕ ಕವಾಯತು, ದೇಶಭಕ್ತಿಗೀತೆ, ಹಾಗೂ ಗಣರಾಜ್ಯೋತ್ಸವ ಬಗ್ಗೆ ಭಾಷಣ ಮಾಡಿದರು.
ಸಹ ಶಿಕ್ಷಕ ತೌಸೀಫ್ ಅಹಮದ್ ಗಣರಾಜ್ಯೋತ್ಸವ ಕಾರ್ಯಕ್ರಮದ ವಿಶೇಷತೆ ಹಾಗೂ ಸಂವಿಧಾನದ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಸಂಘಟನಾ ಕಾರ್ಯದರ್ಶಿ ಚಿನ್ನಾ ಮೈರ ಭಾಗವಹಿಸಿದ್ದರು. ಮುಖ್ಯ ಶಿಕ್ಷಕಿ ಬೆನೆಡಿಕ್ಟಾ ಆಗ್ನೇಸ್ ಮೆಂಡೋನ್ಸಾ ಸ್ವಾಗತಿಸಿ, ಶಿಕ್ಷಕಿ ಸಂಗೀತ ಶರ್ಮ ಪಿ ಜಿ ವಂದಿಸಿದರು., ದೈಹಿಕ ಶಿಕ್ಷಣ ಶಿಕ್ಷಕ ಇಂದುಶೇಖರ್ ಕಾರ್ಯಕ್ರಮ ನಿರೂಪಿಸಿದರು.. ಶಾಲಾ ಶಿಕ್ಷಕಿಯರು ಸಹಕರಿಸಿದರು.

