ದೇಶದ ನಿವೃತ್ತ ವೀರ ಸೃೆನಿಕನಿಗೆ ಸಾಸ್ತಾನ ಟೋಲ್ ನಲ್ಲಿ ಅವಮಾನ : ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯವರಿಗೆ ರಚನ್ ಸಾಲ್ಯಾನ್ ಮನವಿ

0
4

ಉಡುಪಿ :- ದೇಶದಾದ್ಯಂತ ಗಣರಾಜ್ಯೋತ್ಸವನ್ನು ಸಂಭ್ರಮಿಸುವ ದಿನದಂದು ದೇಶಕ್ಕಾಗಿ ಯುದ್ಧಭೂಮಿಯಲ್ಲಿ ಗುಂಡಿನ ದಾಳಿಗೆ ಗಾಯಗೊಂಡರೂ ಎದೆಗುಂದದೆ ದೇಶಕ್ಕಾಗಿ ಹೋರಾಡಿದ ನಿವೃತ್ತ ವೀರ ಸೈನಿಕನಿಗೆ ಟೋಲ್ ವಿನಾಯಿತಿ ನಿರಾಕರಿಸಿದ ಅಮಾನವೀಯ ಘಟನೆ ಉಡುಪಿ ಜಿಲ್ಲೆಯ ಸಾಸ್ತಾನ ಟೋಲ್ ಗೇಟ್ ನಲ್ಲಿ ನಡೆದಿರುವುದು ಖಂಡನೀಯ.
ಸಾಸ್ತಾನ ಟೋಲ್ ಮೂಲಕ ಪ್ರಯಾಣಿಸುತ್ತಿದ್ದ ನಿವೃತ್ತ ಸೈನಿಕ ಶ್ಯಾಮರಾಜ್ ಅವರಿಗೆ ಅಧಿಕೃತ ಟೋಲ್ ವಿನಾಯಿತಿ ಪಾಸ್ ವಿದ್ದರೂ ಟೋಲ್ ಸಿಬ್ಬಂದಿ ವಿನಾಯಿತಿ ನೀಡಲು ನಿರಾಕರಿಸಿರುತ್ತಾರೆ. ದೇಶದ ಬಹುತೇಕ ಟೋಲ್ ಪ್ಲಾಜಾಗಳಲ್ಲಿ ಅನಾಯಾಸವಾಗಿ ದೊರೆಯುವ ಈ ಸೌಲಭ್ಯ, ಸಾಸ್ತಾನದಲ್ಲಿ ಮಾತ್ರ ಸಮಸ್ಯೆಯಾಗಿ ಪರಿಣಮಿಸಿದೆ.
ಕಾಸರಗೋಡು ಜಿಲ್ಲೆಯವರಾದ ಶ್ಯಾಮರಾಜ್ ಅವರು ಭಾರತೀಯ ಸೇನೆಯ 21ನೇ ಪ್ಯಾರಾ ಸ್ಪೆಷಲ್ ಫೋರ್ಸ್‌ನ ಪ್ಯಾರಾಟೂಪರ್ ಆಗಿ ಸೇವೆ ಸಲ್ಲಿಸಿದ್ದರು. ಅವರ ಪತ್ನಿ ಮಿಲಿಟರಿ ನರ್ಸಿಂಗ್ ವಿಭಾಗದಲ್ಲಿ ಲೆಫ್ಟಿನೆಂಟ್ ಕರ್ನಲ್ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪೋಸ್ಟಿಂಗ್ ಸಂಬಂಧಿತ ಪ್ರಯಾಣದ ವೇಳೆ RMA ನೀಡಿದ ಅಧಿಕೃತ ಟೋಲ್ ವಿನಾಯಿತಿ ಪಾಸ್ ಕಾರ್ಡ ಅನ್ನು ತೋರಿಸಿದರೂ ಸಿಬ್ಬಂದಿ ಒಪ್ಪಿಕೊಳ್ಳಲಿಲ್ಲ.

ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ರಾಜ್ಯಾಧ್ಯಕ್ಷ ರಚನ್ ಸಾಲ್ಯಾನ್ ಹೆಜಮಾಡಿ
ಆಪರೇಶನ್ ಪರಾಕ್ರಮ್ ವೇಳೆ ಉಗ್ರರ ವಿರುದ್ಧದ ಕಾರ್ಯಾಚರಣೆ ಮುಗಿಸಿ ವಾಪಸ್ಸಾಗುವ ಸಂದರ್ಭದಲ್ಲಿ ಶ್ಯಾಮರಾಜ್ ರವರ ವಾಹನ ಲ್ಯಾಂಡ್‌ಮೈನ್ ಸ್ಫೋಟಕ್ಕೆ ಒಳಗಾಗಿತ್ತು. ಈ ಭೀಕರ ದುರಂತದಲ್ಲಿ 15 ಸೈನಿಕರು ಹುತಾತ್ಮರಾಗಿದ್ದು, ಬದುಕುಳಿದ ಇಬ್ಬರಲ್ಲಿ ಶ್ಯಾಮರಾಜ್ ಒಬ್ಬರು. ಗಂಭೀರ ಗಾಯಗಳಿಂದಾಗಿ ಇಂದು ಸಂಪೂರ್ಣ ವಿಕಲಾಂಗ ಸ್ಥಿತಿಗೆ ತಲುಪಿದ್ದಾರೆ. ಗಣರಾಜ್ಯೋತ್ಸವದ ದಿನವೇ ದೇಶಕ್ಕಾಗಿ ಪ್ರಾಣ ಪಣಕ್ಕಿಟ್ಟು ಹೋರಾಡಿದ ವೀರ ಸೈನಿಕನ ಮೇಲೆ ಈ ರೀತಿಯ ವರ್ತನೆ ನಡೆದಿರುವುದು ಖಂಡನೀಯವಾಗಿದೆ. ಸಾಸ್ತಾನ ಟೋಲ್ ವ್ಯವಸ್ಥೆಯ ಮೇಲ್ವಿಚಾರಕರು ಮತ್ತು ಸಿಬ್ಬಂದಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೃೆಗೂಳ್ಳುವಂತೆ ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಯವರಿಗೆ ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ರಾಜ್ಯಾಧ್ಯಕ್ಷ ರಚನ್ ಸಾಲ್ಯಾನ್ ಹೆಜಮಾಡಿ ಯವರು ದೂರು ನೀಡಿರುತ್ತಾರೆ.

LEAVE A REPLY

Please enter your comment!
Please enter your name here