ಕಲ್ಲಡ್ಕ : ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ.) ಕಡೇಶಿವಾಲಯ ಇದರ 9ನೇ ವರ್ಷದ ವಾರ್ಷಿಕ ಸಮಾರಂಭ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಫೆಬ್ರವರಿ 1 ಆದಿತ್ಯವಾರ ಪೆರ್ಲಾಪು ಪ್ರಾಥಮಿಕ ಶಾಲಾ ಆವರಣದಲ್ಲಿ ಜರಗಲಿರುವುದು.
ಬೆಳಿಗ್ಗೆ ಗಂಟೆ 8:30 ರಿಂದ ಕುಣಿತ ಭಜನೆ ನಂತರ ಗುರು ಪೂಜಾ ಕಾರ್ಯಕ್ರಮ ಜರಗಳಿದ್ದು 10 ಗಂಟೆಗೆ ಸರಿಯಾಗಿ ಯುವ ವಕೀಲರಾದ ಮೋಹನ್ ಕುಮಾರ್ ನೆತ್ತರ ಕಡೇಶಿವಾಲಯ ರವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ಜರಗಲಿದ್ದು ಪುತ್ತೂರು ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ಶಿಕ್ಷಕ ಪ್ರಶಾಂತ್ ಅನಂತಾಡಿ ದಿಕ್ಸೂಚಿ ಭಾಷಣ ಮಾಡಲಿರುವರು. ಮುಖ್ಯ ಅತಿಥಿಗಳಾಗಿ ಬಂಟ್ವಾಳ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಶ್ರೀ ಗೋಕರ್ನಾಥ ಕ್ಷೇತ್ರ ಕುದ್ರೋಳಿ ಮಂಗಳೂರು ಅಧ್ಯಕ್ಷ ಜಯರಾಜ್ ಸೋಮ ಸುಂದರಂ, ಸರಕಾರಿ ಪ್ರೌಢಶಾಲೆಯ ಕಡೇಶಿವಾಲಯದ ಗಣಿತ ಶಿಕ್ಷಕಿ ಗೀತಾ ಕುಮಾರಿ ಮೊದಲಾದವರು ಭಾಗವಹಿಸಲಿದ್ದು, ಈ ಸಂದರ್ಭದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿಲ್ಲವ ಬ್ರಿಗೇಡ್ನ ಸಂಸ್ಥಾಪಕ ಸದಾನಂದ ಪೂಜಾರಿಯವರಿಗೆ ಸನ್ಮಾನ, ಉದ್ಯಮಿ ಅಶೋಕ್ ಶಾಂತಿಗುಡ್ಡೆ, ಶಿಕ್ಷಕಿ ಗೀತಾ ಕುಮಾರಿ, ಹಾಗೂ ಯುವ ಪ್ರತಿಭೆ ದಿಶಾ ಕೆ ಪೂಜಾರಿ ಬರಿಮಾರು ಇವರಿಗೆ ಅಭಿನಂದನಾ ಕಾರ್ಯಕ್ರಮ, ಹಾಗೂ ಎಸ್ ಎಸ್ ಎಲ್ ಸಿ, ಪಿಯುಸಿಹಾಗೂ ಪದವಿ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು, ಸಭಾ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿವೆ ಎಂದು ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ.) ಅಧ್ಯಕ್ಷರಾದ ಯಶವಂತ್ ಸಾಲಿಯನ್ ಪತ್ತುಕೊಡಂಗೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

