ಕಾಸರಗೋಡು : ಇಲ್ಲಿನ ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯದ ಅಂಗಸಂಸ್ಥೆಯಾದ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಪ್ರಥಮ ವಾರ್ಷಿಕೋತ್ಸವವು 2026 ಫೆ. 22ರಂದು ಬೆಳಗ್ಗೆ 7 ಗಂಟೆಯಿಂದ ಕನ್ನಡ ಭವನದ ಬಯಲು ರಂಗಮಂದಿರದಲ್ಲಿ ನಡೆಯಲಿದೆ.
ಈ ಸಂದರ್ಭದಲ್ಲಿ ನಡೆಯುವ ಚುಟುಕು ಯುವ ಕವಿಗೋಷ್ಠಿಯಲ್ಲಿ ಭಾಗವಹಿಸುವ ಆಸಕ್ತರು ತಮ್ಮ ಹೆಸರನ್ನು ನೊಂದಾಯಿಸಬಹುದು. ಈ ವಿಭಾಗದಲ್ಲಿ ಭಾಗವಹಿಸುವವರು 18 ವರ್ಷಕ್ಕಿಂತ ಕೆಳಗಿನವರಾಗಿರಬೇಕು. ಒಬ್ಬರಿಗೆ 3 ಚುಟುಕು ವಾಚನಕ್ಕೆ ಅವಕಾಶ ಇದೆ.
ಕವಿಗಳಿಗೆ ಮುಕ್ತ ಅವಕಾಶವಿದ್ದು ಆಸಕ್ತರು ತಮ್ಮ ಹೆಸರನ್ನು ವಿರಾಜ್ ಅಡೂರು (9447490344) ರಲ್ಲಿ ನೊಂದಾಯಿಸಬೇಕಾಗಿ ಸಂಸ್ಥೆಯ ಕೇಂದ್ರ ಸಮಿತಿಯ ಅಧ್ಯಕ್ಷರಾದ ಡಾ.ಕೆ ವಾಮನ್ ರಾವ್ ಬೇಕಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

