ಕಾಸರಗೋಡು : ಇಲ್ಲಿನ ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯದ ಅಂಗಸಂಸ್ಥೆಯಾದ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ
ವಾರ್ಷಿಕೋತ್ಸವದ ಅಂಗವಾಗಿ 2026 ಫೆ. 22ರಂದು ಬೆಳಗ್ಗೆ 7 ಗಂಟೆಯಿಂದ ಕನ್ನಡ ಭವನದ ಬಯಲು ರಂಗಮಂದಿರದಲ್ಲಿ ಕಾಸರಗೋಡು – ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ ನಡೆಯಲಿದೆ.
ಈ ಸಂದರ್ಭದಲ್ಲಿ ನಡೆಯುವ ಚುಟುಕು ಕವಿಗೋಷ್ಠಿಯಲ್ಲಿ ಭಾಗವಹಿಸುವ ಆಸಕ್ತರು ತಮ್ಮ ಹೆಸರನ್ನು ನೊಂದಾಯಿಸಬಹುದು. ಈ ವಿಭಾಗದಲ್ಲಿ ಭಾಗವಹಿಸುವವರು 18 ವರ್ಷಕ್ಕಿಂತ ಮೇಲ್ಪಟ್ಟವರಾಗಿರಬೇಕು. ಒಬ್ಬರಿಗೆ 3 ಚುಟುಕು ವಾಚನಕ್ಕೆ ಅವಕಾಶ ಇದೆ. ಕವಿಗಳಿಗೆ ಮುಕ್ತ ಅವಕಾಶವಿದ್ದು ಆಸಕ್ತರು ತಮ್ಮ ಹೆಸರನ್ನು ವಿರಾಜ್ ಅಡೂರು (9447490344) ರಲ್ಲಿ ನೊಂದಾಯಿಸಬೇಕಾಗಿ ಸಂಸ್ಥೆಯ ಕೇಂದ್ರ ಸಮಿತಿಯ ಅಧ್ಯಕ್ಷರಾದ ಡಾ.ಕೆ ವಾಮನ್ ರಾವ್ ಬೇಕಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

