ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ ಬಂಟ್ವಾಳ ಇಲ್ಲಿ 77 ನೇ ವರ್ಷದ ಸಂಭ್ರಮದ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ವಿದ್ಯಾರ್ಥಿಗಳಿಂದ ದೇಶ ಭಕ್ತಿಯನ್ನು ಮೂಡಿಸುವಂತಹ ವಿವಿಧ ಕರ‍್ಯಕ್ರಮಗಳನ್ನು ಹಾಗೂ ಆರ್ಮಿ, ನೇವಿ ಮತ್ತು ಸ್ಕೌಟ್ ಗೈಡ್ ಘಟಕದ ವಿದ್ಯಾರ್ಥಿಗಳಿಂದ ಪಥಸಂಚಲನ ಹಮ್ಮಿಕೊಳ್ಳಲಾಯಿತು.
ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಯುತ ಹರಿಪ್ರಸಾದ್ ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವವು ಬ್ರಿಟಿಷ್ ಆಡಳಿತದ ನಂತರ ಭಾರತವು ತನ್ನದೇ ಆದ ಸಂವಿಧಾನವನ್ನು ಅಳವಡಿಸಿಕೊಂಡು ಪ್ರಜಾಪ್ರಭುತ್ವದ ಹಾದಿಯಲ್ಲಿ ಮುನ್ನಡೆದ ದಿನವನ್ನು ನೆನಪಿಸುತ್ತದೆ.
ಇದು ದೇಶದ ಐಕ್ಯತೆ, ಸಮಗ್ರತೆ ಮತ್ತು ಸಂವಿಧಾನ ಮೌಲ್ಯಗಳನ್ನು ಎತ್ತಿ ಹಿಡಿಯುವ ರಾಷ್ಟಿçÃಯ ಹಬ್ಬವಾಗಿದೆ ಎಂದು ನುಡಿದರು. ಸಂಸ್ಕೃತ ಪ್ರಾಧ್ಯಾಪಕರಾದ ಪರಮೇಶ್ವರ್ ಹೆಗ್ಡೆ ಶುಭ ಹಾರೈಸಿದರು. ಶಾಲೆಯ ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿಯಾದ ಚೈತ್ರ ಶೆಟ್ಟಿ ಮತ್ತು ಪೂರ್ವ ಪ್ರಾಥಮಿಕ ವಿಭಾಗದ ಸಂಯೋಜಕಿ ವೀಣಾ ದೇವಾಡಿಗ ಮತ್ತು ಶಾಲೆಯ ಶಿಕ್ಷಕ ಮತ್ತು ಶಿಕ್ಷಕೇತರರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕರ‍್ಯಕ್ರಮದ ಕೊನೆಯಲ್ಲಿ ಸಿಹಿ ತಿಂಡಿಹಂಚಲಾಯಿತು.

