ಕಾಡಾನೆ ದಾಳಿ : ಸ್ಥಳದಲ್ಲೇ ಕಾರ್ಮಿಕ ಮೃತ್ಯು

0
47

ಮಡಿಕೇರಿ : ಕಾಡಾನೆ ದಾಳಿಗೆ ಕಾರ್ಮಿಕರೊಬ್ಬರು ಬಲಿಯಾದ ಘಟನೆ ಕೊಡಗು ಜಿಲ್ಲೆ ಸಿದ್ದಾಪುರ ಸಮೀಪ ಗೌರಿಬೆಟ್ಟದಲ್ಲಿ ನಡೆದಿದೆ. ಹುಂಡಿ ಗ್ರಾಮದ ನಿವಾಸಿ ಲತಿಫ್(65) ಮೃತಪಟ್ಟವರು. ಬಜೆಗೊಲ್ಲಿ ಸಮೀಪ ತೋಟದಲ್ಲಿ ಲತೀಫ್ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಕಾಡಾನೆ ದಾಳಿ ಮಾಡಿದೆ. ಗಂಭೀರವಾಗಿ ಗಾಯಗೊಂಡ ಲತೀಫ್ ಮೃತಪಟ್ಟಿದ್ದಾರೆ. ಮೃತರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.

ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳ ನಿರ್ಲಕ್ಷವೇ ಘಟನೆಗೆ ಕಾರಣವೆಂದು ಆರೋಪಿಸಿದ್ದಾರೆ. ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದು, ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಹಾರದ ಭರವಸೆ ನೀಡಿದ್ದಾರೆ.

LEAVE A REPLY

Please enter your comment!
Please enter your name here