ಕನ್ನಡ ಗ್ರಾಮದಲ್ಲಿ ಕಾಸರಗೋಡು ಗೋ-ಕುಟೀರದ ನಿರ್ಮಾಣಕ್ಕೆ ಚಾಲನೆ

0
30

ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ(ರಿ),ಕನ್ನಡ ಗ್ರಾಮ, ಕಾಸರಗೋಡು ಇದರ 35ನೇ ಸಂಸ್ಥಾಪನಾ ವರ್ಷಾಚರಣೆಯ ಸಂಭ್ರಮ ಹಾಗೂ ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ ಶಿವರಾಮ ಕಾಸರಗೋಡು ಅವರ 60 ನೇ ಜನ್ಮ ವರ್ಷಾಚರಣೆಯನ್ನು ಗೋ- ಸೇವೆಯ ಮೂಲಕ ಗುರುತಿಸಿಕೊಳ್ಳುವುದಕ್ಕಾಗಿ ಕಾಸರಗೋಡು ಕನ್ನಡ ಗ್ರಾಮದ ಆವರಣದಲ್ಲಿ 2025 ನವಂಬರ್ 4 ರಂದು “ಕಾಸರಗೋಡು ಗೋ-ಕುಟೀರ”ಕ್ಕೆ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರು ಭೂಮಿ ಪೂಜೆ ಸಲ್ಲಿಸಿ, “ಕಾಸರಗೋಡು ಗೋ-ಕುಟೀರದ ನಿರ್ಮಾಣಕ್ಕೆ ಚಾಲನೆ ನೀಡಿದರು.

ಜಗಜ್ಜನನಿ ಗೋಮಾತೆಯ ಆಶೀರ್ವಾದವನ್ನು ಪಡೆಯುವುದಕ್ಕಾಗಿ ದೇಸಿ ಗೋವುಗಳನ್ನು ಉಳಿಸಿ ಬೆಳೆಸುವುದಕ್ಕಾಗಿ ಕಾಸರಗೋಡು ಗೋ-ಕ್ಷೇತ್ರ- ಗೋ-ಕುಟೀರವನ್ನು ಒಂದು ಧಾರ್ಮಿಕ ಶ್ರದ್ದಾ ಕೇಂದ್ರವನ್ನಾಗಿ ರೂಪುಗೊಳಿಸುವುದಕ್ಕಾಗಿ ಸಾರ್ವಜನಿಕರು,ಹಾಗೂ ಗೋ ಭಕ್ತರ ಸಹಕಾರದಿಂದ ಸುಮಾರು 25 ಲಕ್ಷ ರೂಪಾಯಿ ವೆಚ್ಚದಲ್ಲಿ ಬೃಹತ್ ಕಾರ್ಯ ಯೋಜನೆಯನ್ನು ಕೈಗೊಳ್ಳಲಾಗಿದೆ. ರಾಜ್ಯದ ಪ್ರತಿಯೊಂದು ಮನೆ ಮನೆಗಳಿಂದ ಗೋವುಗಳಿಗೆ ಭಕ್ತಿ ಪೂರ್ವಕವಾಗಿ ಮೇವು, ಗೋ-ಆಹಾರವನ್ನು ಭಕ್ತಿ ಶ್ರದ್ಧೆಯಿಂದ “ಹೊರೆಕಾಣಿಕೆ-ಹಸಿರು ವಾಣಿ” ಮಾದರಿಯಲ್ಲಿ ದಿನನಿತ್ಯ ಗೋ ಸೇವೆಯನ್ನು ಸಲ್ಲಿಸುವ ಮೂಲಕ ಗೋ- ಸೇವಾ ಅಭಿಯಾನವನ್ನು ಪ್ರಾರಂಭಿಸುವ ಉದ್ದೇಶವನ್ನು ಹೊಂದಲಾಗಿದೆ.

ಗೋ- ಭಕ್ತರ ಕುಟುಂಬಸ್ಥರ ಮಕ್ಕಳಿಗೆ ದೇಸಿ ಗೋವಿನ ಹಾಲಿನ ಬಳಕೆಯ ಉದ್ದೇಶದಿಂದ ಹಿಂದು ಸಮಾಜದ ಪ್ರತಿ ಕುಟುಂಬದವರು,ಕ್ಷೇತ್ರಗಳು, ಮಠ, ಮಂದಿರ, ದೈವಸ್ಥಾನ, ದೇವಸ್ಥಾನಗಳ ಧಾರ್ಮಿಕ ಉತ್ಸವ ಕಾರ್ಯಕ್ರಮಗಳಿಗೆ ಗೋಮೂತ್ರ,ಪಂಚಗವ್ಯ ಹಾಗೂ ಗೋ-ಸಗಣಿ ಗೋಮಯ ಪೂಜಾ ಇತ್ಯಾದಿ ಅವಶ್ಯಕತೆ ಇರುವವರಿಗೆ, ನಮ್ಮ ಕಾಸರಗೋಡು “ಗೋ-ಕುಟೀರ”ದಲ್ಲಿ ದಿನನಿತ್ಯ ನಿರಂತರವಾಗಿ ದೊರಕುವಂತೆ ಮಾಡಲು ಉದ್ದೇಶಿಸಲಾಗಿದೆ.

2025 ರ ದೀಪಾವಳಿ ಹಬ್ಬದ ಗೋ ಪೂಜೆಯ ದಿನದಂದು ಗೋ ಸಂಭ್ರಮವನ್ನು ಶ್ರದ್ಧಾ ಪೂರ್ವಕವಾಗಿ ಆಚರಿಸಿ ಗೋ- ಸಂಕಲ್ಪ ಮಾಡಲಾಯಿತು. ಗೋ-ಕುಟೀರದಲ್ಲಿ ಪ್ರತಿನಿತ್ಯ ಬೆಳಿಗ್ಗೆ ಮತ್ತು ಸಂಜೆಯ ಹೊತ್ತು ಗೋವುಗಳಿಗೆ ಸ್ನಾನ ಮಾಡಿಸಿ ಗೋ ಗ್ರಾಸ ನೀಡಲಿಚ್ಚಿಸುವ ಗೋ ಸೇವಾ ಭಕ್ತರ ಕುಟುಂಬಸ್ಥರಿಗೆ ಗೌರವ ಪೂರ್ವಕವಾಗಿ ಆಹ್ವಾನ ನೀಡಲಾಗಿದೆ.

ಈ ದಿನದಿಂದಲೇ ಸಮುದಾಯದವರೆಲ್ಲರೂ ಸಕ್ರಿಯವಾಗಿ ಭಾಗವಹಿಸಿ, ಗೋ-ಮಾತೆಯ ಸೇವೆಯನ್ನು ಪ್ರತಿಯೊಂದು ಮನೆಯವರು, ಕುಟುಂಬದವರು ಶ್ರದ್ಧಾ ಭಕ್ತಿಯಿಂದ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲಿ ಪ್ರತಿ ಕುಟುಂಬದವರು ಒಂದು ದಿನ ಗೋಮಾತೆಯ ಸೇವೆ ಸಲ್ಲಿಸಿ ಅನುಗ್ರಹ ಪಡೆಯಲು,ತಮ್ಮ ಮನೆಗಳಲ್ಲಿ ನಡೆಯುವ ಶುಭ ಸಮಾರಂಭಗಳ ನಿಮಿತ್ತ ಗೋ-ಕ್ಷೇತ್ರ ಗೋ-ಕುಟೀರಕ್ಕೆ ಆಗಮಿಸಿ ಗೋ- ಸೇವೆಯೊಂದಿಗೆ ಕುಟುಂಬದವರು ಸಂಭ್ರಮವನ್ನು ಹಂಚಿಕೊಳ್ಳಲು ಉದ್ದೇಶಿಸಲಾಗಿದೆ.

ಪ್ರತಿಯೊಬ್ಬರೂ ಕುಟುಂಬ ಸಮೇತರಾಗಿ ಕಾಸರಗೋಡು ಕನ್ನಡ ಗ್ರಾಮಕ್ಕೆ ಆಗಮಿಸಿ ಗೋ-ಗ್ರಾಸ ನೀಡಿ ಗೋ- ಆರತಿಯನ್ನು ಬೆಳಗಿಸಿ ಗೋ- ಸಂಕೀರ್ತನೆಯನ್ನು ಹಾಡಿ ಗೋಕುಟೀರದಲ್ಲಿ ಪ್ರಾರ್ಥನೆ ಸಲ್ಲಿಸಿ ತಮ್ಮ ಇಷ್ಟಾರ್ಥವನ್ನು ಪಡೆದುಕೊಳ್ಳಬಹುದು. ಕಾಮಧೇನು ಸ್ವರೂಪದ ಗೋವಿಗೆ ಗೋಮಾತೆ ಎಂಬ ಹೆಸರಿನಿಂದ ವಿಶೇಷ ಸ್ಥಾನ ನೀಡಿ ಪೂಜಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾದ ಗೋವುಗಳ ಮಹತ್ವ ಸಂರಕ್ಷಣೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರಯತ್ನಿಸಲಾಗುವುದು .

ಗೋ ಪೂಜೆಯಂದು ಗೋವುಗಳಿಗೆ ಸ್ನಾನ ಮಾಡಿಸಿ, ಅರಶಿಣ, ಕುಂಕುಮ,ಹೂವುಗಳಿಂದ ಅಲಂಕರಿಸಿ ಅಕ್ಕಿ ಬೆಲ್ಲ ಹಣ್ಣು ಗೋ- ಗ್ರಾಸ ನೀಡಿ ಅಷ್ಟ ಬಗೆಯ ಗೋ – ಭೋಜನವನ್ನು ಸಿದ್ಧಪಡಿಸಿ ಗೋ- ಆರತಿಯನ್ನು ಬೆಳಗಿಸಿ ಗೋ ಪೂಜೆಯನ್ನು ಶ್ರದ್ಧಾ ಭಕ್ತಿಯಿಂದ ನಡೆಸಲಾಗುವುದು. ಕಾಸರಗೋಡು ಗೋ-ಕುಟೀರ ನಿರ್ಮಾಣಕ್ಕೆ ಸಹಕಾರ ನೀಡಿದ ಸಂಘ ಸಂಸ್ಥೆಗಳು, ಸಾರ್ವಜನಿಕರು ಹಾಗೂ ಗೋ- ಸೇವಾ ದಾನಿಗಳ ಹೆಸರಿನಲ್ಲಿ ಅವರ ಕುಟುಂಬದ ಒಳಿತಿಗಾಗಿ ಗೋವುಗಳಿಗೆ ಗೋ-ಗ್ರಾಸ ಗೋ- ಆಹಾರವನ್ನು ನೀಡಿ ಗೋ- ಸಂಕೀರ್ತನೆಯೊಂದಿಗೆ ಗೋ- ಆರತಿಯನ್ನು ಬೆಳಗಿಸಿ ಪ್ರಾರ್ಥನೆಯನ್ನು ಸಲ್ಲಿಸಲಾಗುವುದು.
ಗೋ – ಸೇವೆಯಲ್ಲಿ ಭಾಗವಹಿಸಲಿಚ್ಚಿಸುವ ದಾನಿಗಳು ಶಿವರಾಮ ಕಾಸರಗೋಡು, ಅಧ್ಯಕ್ಷರು, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ),ಕನ್ನಡ ಗ್ರಾಮ, ಕನ್ನಡ ಗ್ರಾಮ ರಸ್ತೆ, ಕಾಸರಗೋಡು.

LEAVE A REPLY

Please enter your comment!
Please enter your name here