ಬಂಟ್ವಾಳ : ಇಲ್ಲಿನ ರಾಯಿ ಸಮೀಪದ ಕೈತ್ರೋಡಿ ಕ್ವಾರ್ಟಸ್ ಶ್ರೀ ದುರ್ಗಾಪರಮೇಶ್ವರಿ ಸೇವಾ ಸಮಿತಿ ವತಿಯಿಂದ ಫೆ.6ರಂದು ಸಂಜೆ 6 ಗಂಟೆಗೆ ಕಟೀಲು ಮೇಳದಿಂದ 33ನೇ ವರ್ಷದ ‘ಶ್ರೀದೇವಿ ಮಹಾತ್ಮೆ’ ಯಕ್ಷಗಾನ ಬಯಲಾಟ ನಡೆಯಲಿದೆ. ರಾತ್ರಿ 8ಗಂಟೆಗೆ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.
ಅಂದು ಬೆಳಿಗ್ಗೆ 10 ಗಂಟೆಗೆ ರಾಯಿ ಶ್ರೀ ಸತ್ಯನಾರಾಯಣ ಸೇವಾ ಸಮಿತಿ ವತಿಯಿಂದ ರಾಯಿ ಅಶ್ವತ್ಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
