ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ‘ ಇನ್ಸ್ಟಿಟ್ಯೂಷನ್ಸ್ ಆಫ್ ಲೆಗಸಿ ‘ ಪ್ರಶಸ್ತಿ 

0
22

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಮುನ್ನಡೆಯುತ್ತಿರುವ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಕಾರ್ಯ ಮತ್ತು ಸಾಧನೆಯನ್ನು ಗುರುತಿಸಿ ಬೆಂಗಳೂರಿನ ಅಕಾಡೆಮಿಕ್ ಇನ್‌ಸೈಟ್ಸ್ ವತಿಯಿಂದ ‘ ‘ ‘ಇನ್ಸ್ಟಿಟ್ಯೂಷನ್ಸ್ ಆಫ್ ಲೆಗಸಿ ‘ ಪ್ರಶಸ್ತಿ ನೀಡಿ ಗೌರವಿಸಿದೆ. 

ಬೆಂಗಳೂರಿನಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಉಜಿರೆಯ ಎಸ್.ಡಿ.ಎಂ (ಸ್ವಾಯತ್ತ) ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ್ ಪಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಪರವಾಗಿ ಪ್ರಶಸ್ತಿ ಸ್ವೀಕಾರ ಮಾಡಿದರು. ಪ್ರಶಸ್ತಿ ನೀಡಿದ ಬೆಂಗಳೂರಿನ ಅಕಾಡೆಮಿಕ್ ಇನ್‌ಸೈಟ್ಸ್ ಸಂಸ್ಥೆಯೂ, ಹಲವು ದಶಕಗಳಿಂದ ಶಿಕ್ಷಣ ಮತ್ತು ತತ್ಸಂಬಂಧಿ ಕ್ಷೇತ್ರಗಳ ಬೆಳವಣಿಗೆಗೆ ಪವಿಶ್ರಾಂತವಾಗಿ ಸೇವೆ ಸಲ್ಲಿಸುತ್ತಿರುವ ಎಸ್ ಡಿ ಎಮ್ ಶಿಕ್ಷಣ  ಸಂಸ್ಥೆಯ ಸೇವೆಯನ್ನು ಗುರುತಿಸಿ ಈ  ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಶುಭಾಶಯ ತಿಳಿಸಿದರು.

ಪ್ರಶಸ್ತಿಗೆ ಪಾತ್ರವಾದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಮತ್ತು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ ಅಭಿನಂದನೆಗಳನ್ನು ತಿಳಿಸಿರುತ್ತಾರೆ. ಎಸ್.ಡಿ.ಎಂ ಶಿಕ್ಷಣ  ಸಂಸ್ಥೆಗಳ ಆಡಳಿತ ಮಂಡಳಿ ಸೇರಿದಂತೆ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್., ಪ್ರಾಚಾರ್ಯರು, ಪೋಷಕರು ಹಾಗು ವಿದ್ಯಾರ್ಥಿಗಳು ಧನ್ಯವಾದಗಳನ್ನು ತಿಳಿಸಿರುತ್ತಾರೆ.

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಸಾಗುತ್ತಿರುವ ವಿಜ್ಞಾನ, ಆಯುರ್ವೇದ , ಕಾನೂನು, ತಂತ್ರಜ್ಞಾನ, ಪದವಿ, ಸ್ನಾತಕೋತ್ತರ, ಮೆಡಿಕಲ್ ಸೇರಿದಂತೆ ಸಂಸ್ಥೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲೂ ಶಿಸ್ತು, ಸಂಸ್ಕಾರ, ಮೌಲ್ಯ ಹಾಗು ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ನಿರಂತರ ಪ್ರೋತ್ಸಾಹ ಮತ್ತು ಸಹಕಾರವನ್ನು ನೀಡುತ್ತಿದೆ.

ಈಗಾಗಲೇ ನೂರಾರು ಜನ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಹಲವಾರು ಸಂಘ ಸಂಸ್ಥೆಗಳು ಶ್ಲಾಘಿಸಿ ಗೌರವಿಸಿದೆ. ಇದೀಗ ಬೆಂಗಳೂರಿನ ಅಕಾಡೆಮಿಕ್ ಇನ್‌ಸೈಟ್ಸ್ ವತಿಯಿಂದ ”ಇನ್ಸ್ಟಿಟ್ಯೂಷನ್ಸ್ ಆಫ್ ಲೆಗಸಿ ‘ ಪ್ರಶಸ್ತಿ ನೀಡಿ ಗೌರವಿಸಿರುವುದು ಸಂಸ್ಥೆಯ ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿಯನ್ನು ಹೆಚ್ಚಿಸಿದೆ. ಅಕಾಡೆಮಿಕ್ ಇನ್‌ಸೈಟ್ಸ್ ಸಂಸ್ಥೆಗೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಪರವಾಗಿ ಕೃತಜ್ಞತೆಯನ್ನು ತಿಳಿಸುತ್ತೇನೆ – ಡಾ. ಸತೀಶ್ಚಂದ್ರ ಎಸ್ ,ಕಾರ್ಯದರ್ಶಿಗಳು ಎಸ್.ಡಿ.ಎಂ ಶಿಕ್ಷಣ ಸಂಸ್ಥೆ .

LEAVE A REPLY

Please enter your comment!
Please enter your name here