ಡಾ. ಭಾಸ್ಕರಾನಂದ ಕುಮಾರ್ ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ

0
14

ವರದಿ ರಾಯಿ ರಾಜ ಕುಮಾರ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಸದಸ್ಯರುಗಳ ಸಭೆ ಫೆಬ್ರವರಿ ಆರರಂದು ನಡೆಯಿತು. ಅಧ್ಯಕ್ಷ ರವಿರಾಜ್ ಎಸ್ ಪಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾ‌ರ್ ಅವರನ್ನು ಆಯ್ಕೆ ಮಾಡಲಾಯಿತು. ಮೇ ಮೂರರಂದು ಉಡುಪಿಯಲ್ಲಿ ಯಕ್ಷಗಾನ ಕಲಾ ರಂಗದ ಐವೈಸಿ ಸಭಾಂಗಣದಲ್ಲಿ ನಡೆಯಲಿರುವ ಉಡುಪಿ ತಾಲೂಕು ಹದಿನಾರನೇ ಸಾಹಿತ್ಯ ಸಮ್ಮೇಳನಕ್ಕೆ ಅವರು ಅಧ್ಯಕ್ಷರಾಗಿರುತ್ತಾರೆ ಎಂದು ಗೌರವ ಕಾರ್ಯದರ್ಶಿ ಜನಾರ್ಧನ, ಹಾಗೂ ರಜನಿ ವಸಂತ್ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here