ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ : ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರು ಸೆರೆ

0
12

ಪುತ್ತೂರು : ನಿಷೇದಿತ ಮಾದಕ ವಸ್ತು ಎಂಡಿಎಂಎ ಅನ್ನು ಬೆಂಗಳೂರು ನಗರದಿಂದ ತಂದು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಉಳ್ಳಾಲದ ಮುಸ್ತಫಾ ಸೀದಿಯಬ್ಬ, ಮೈಯದ್ದಿ, ಮೊಹಮ್ಮದ್ ಶಿಫಾನ್ ಬಂಧಿತ ಆರೋಪಿಗಳು.

ಉಳ್ಳಾಲ ತಾಲೂಕಿನ ತಲಪಾಡಿಯ ಪರಿಸರದಲ್ಲಿ ಸ್ವಿಫ್ಟ್ ಕಾರಿನಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕಾರನ್ನು ಪತ್ತೆ ಹಚ್ಚಿ ಮೂವರನ್ನು ಬಂಧಿಸಿ ರೂ.11,90,000/- ಮೌಲ್ಯದ 118.13 ಗ್ರಾಂ ತೂಕದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ, ಮೊಬೈಲ್ ಫೋನ್-4, ಸ್ಕ್ರಿಫ್ಟ್ ಕಾರು ಸಹಿತ ಒಟ್ಟು ರೂ. 17,95,000/- ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಈ ಬಗ್ಗೆ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಮುಸ್ತಫಾ ಸೀದಿಯಬ್ಬ ಎಂಬಾತನ ಮೇಲೆ ಈ ಹಿಂದೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ದನ ಕಳ್ಳತನ ಪ್ರಕರಣ ಮತ್ತು ಮೈಯದ್ದಿ ಎಂಬಾತನ ಮೇಲೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣ ದಾಖಲಾಗಿದ್ದು, ಈ ಮಾದಕವಸ್ತು ಮಾರಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿದ್ದು,, ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ. ಈ ಮಾದಕ ವಸ್ತು ಎಂಡಿಎಂಎ ಮಾರಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ ಎಂದು ಇಲಾಖಾ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here