ಚಿಕ್ಕಮಗಳೂರು : ಲಾರಿ-ಟ್ರ್ಯಾಕ್ಟರ್ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರುಮೃತ್ಯು ,13 ಜನರಿಗೆ ಗಾಯ

0
41

ಚಿಕ್ಕಮಗಳೂರು : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಲಾರಿ ಮತ್ತು ಟ್ರ್ಯಾಕ್ಟರ್ ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲಿ ಸಾವನಪ್ಪಿದ್ದು, ಹಲವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಬಗ್ಗುವಳ್ಳಿ ಗೇಟ್ ಬಳಿ ಈ ಒಂದು ಅಪಘಾತ ನಡೆದಿದೆ.

ಅಪಘಾತದಲ್ಲಿ ಟ್ರ್ಯಾಕ್ಟರ್ ನಲ್ಲಿದ್ದ ಇಬ್ಬರೂ ಸಾವನ್ನಪ್ಪಿದ್ದು, 13 ಜನರಿಗೆ ಗಾಯಗಳಾಗಿವೆ. ಓರ್ವ ಸ್ಥಳದಲ್ಲಿಯೇ ಸಾವನಪ್ಪಿದ್ದು ಮತ್ತೊರ್ವ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಮಾಳಿಗೆ ಹಟ್ಟಿ ಗ್ರಾಮದ ಮಂಜುನಾಥ್ (34) ಸ್ಥಳದಲ್ಲಿ ಸಾವನ್ನಪ್ಪಿದ್ದರೆ, ಮೆಗ್ಗಾನ್ ಆಸ್ಪತ್ರೆಯಲ್ಲಿ ಹೋಳಿಯಪ್ಪ (48) ಸಾವನಪ್ಪಿದ್ದಾರೆ. ಮೃತರು ಹೊಸದುರ್ಗ ತಾಲೂಕಿನ ಮಾಳಿಗೆ ಹಟ್ಟಿ ಗ್ರಾಮದವರು ಎಂದು ತಿಳಿದುಬಂದಿದೆ.

ಚಿತ್ರದುರ್ಗ ಜಿಲ್ಲೆಯ ತಾಲೂಕಿನ ಮಾಳಿಗೆ ಹಟ್ಟಿ ಗ್ರಾಮದ ಬಗ್ಗೆ ತಿಳಿದು ಬಂದಿದೆ ಗ್ರಾಮಸ್ಥರು ಮೂರು ಟ್ರಾಕ್ಟರ್ ಗಳಲ್ಲಿ ಗಳಲ್ಲಿ ಕಲ್ಲತ್ತಿಗಿರಿ ದೇಗುಲಕ್ಕೆ ಬಂದಿದ್ದರು ದೇವಾಲಯದಲ್ಲಿ ಪೂಜೆ ಮುಗಿಸಿ ವಾಪಸ್ ತೆರಳುವಾಗ ಈ ಅಪಘಾತ ಸಂಭವಿಸಿದೆ. ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here