ಬೆಳ್ತಂಗಡಿ : ಹೀಲಿಯಂ ಗ್ಯಾಸ್ ಸೋರಿಕೆಯಾಗಿ ಅಗ್ನಿ ಅವಘಡ : ‘KAF’ ಕ್ರಿಯೇಟಿವ್ ಶಾಪ್ ಬೆಂಕಿಗಾಹುತಿ

0
48

ಬೆಳ್ತಂಗಡಿ : ಹೀಲಿಯಂ ಗ್ಯಾಸ್ ಸೋರಿಕೆಯಾಗಿ ಭೀಕರ ಅಗ್ನಿ ಅವಘಡ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಈಅಗ್ನಿ ಅವಘಡ ಸಂಭವಿಸಿದ್ದು , ಘಟನೆಯಲ್ಲಿ ಕೆಎಎಫ್ ಕ್ರಿಯೇಟಿವ್ ಶಾಪ್ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ.

ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳ ಸಿಬ್ಬಂದಿಗಳು ಬೆಂಕಿ ನಂದಿಸಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ರೀತಿಯಾದ ಪ್ರಾಣಪಾಯ ನಡೆದಿಲ್ಲ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಠಾಣೆ ಪೋಲಿಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here