ಕಾಪು ವಿಧಾನಸಭಾ ಕ್ಷೇತ್ರದ ಕೊಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಆಯುಷ್ಮಾನ್ ಆರೋಗ್ಯ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ಪಿ.ಎಂ ಅಭೀಮ್ ಯೋಜನೆಯಡಿ 65 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 14-02-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಕೊಡಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂದೀಪ್ ಮಡಿವಾಳ, ಪಂಚಾಯತ್ ಸದಸ್ಯರಾದ ಆಶಾ ಶೆಟ್ಟಿ, ತಾಲೂಕು ವೈದ್ಯಾಧಿಕಾರಿಗಳಾದ ವಾಸುದೇವ ಉಪಾಧ್ಯಾಯ, ಪೆರ್ಣಂಕಿಲ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿಗಳಾದ ರವೀಂದ್ರ ಹಾಗೂ ಕೊಡಿಬೆಟ್ಟು ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು.

