ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಜೋ ಸೈಮನ್ ಫಿಲಂ ಚೇಂಬರ್ನಲ್ಲಿ ಆಯೋಜಿಸಲಾಗಿದ್ದ ಸಭೆಯೊಂದರಲ್ಲಿ ಭಾಗಿ ಆಗಿದ್ದಾಗಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸಹ ಫಿಲಂ ಚೇಂಬರ್ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕಾರಿ ಸಭೆಯಲ್ಲಿ ಭಾಗವಹಿಸಿದ್ದಾಗ ಅವರಿಗೆ ಎದೆ ನೋವು ಕಂಡು ಬಂತು. ಕೂಡಲೇ ಅವರನ್ನು ಮಲ್ಲಿಗೆ ಆಸ್ಪತ್ರೆಗೆ ಕೊಂಡೊಯ್ಯಲಾಯ್ತಾದರೂ ಅವರು ಬದುಕುಳಿಯಲಿಲ್ಲ. ಜೋ ಸೈಮನ್ ಅವರು ಕನ್ನಡದ ಸುಮಾರು 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ನಿರ್ದೇಶಕ, ನಟ, ಗೀತರಚನೆಕಾರನಾಗಿ ಅವರು ಕನ್ನಡ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದಾರೆ.

