ಕಾರ್ಕಳ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ

0
8

ಕಾರ್ಕಳ, ಫೆ.14: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಕಳ ತಾಲೂಕು ಘಟಕದ 2025-28ನೇ ಸಾಲಿನ ನೂತನ ಅಧ್ಯಕ್ಷರಾಗಿ ವಾರ್ತಾಭಾರತಿ ಪತ್ರಿಕೆಯ ಮುಹಮ್ಮದ್ ಶರೀಫ್ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಕಾರ್ಕಳ ಪತ್ರಿಕಾ ಭವನದಲ್ಲಿ ನಡೆದ ಚುನಾವಣೆಯಲ್ಲಿ ಈ ಆಯ್ಕೆ ಮಾಡಲಾಯಿತು.

ಪ್ರಧಾನ ಕಾರ್ಯದರ್ಶಿಯಾಗಿ ಸಂಜೆಪ್ರಭ ಪತ್ರಿಕೆಯ ವರದಿಗಾರ ಹರೀಶ್ ಪೂಜಾರಿ, ಕೋಶಾಧಿಕಾರಿಯಾಗಿ ಮಾಧ್ಯಮಬಿಂಬ ಪತ್ರಿಕೆಯ ವರದಿಗಾರ ಸತೀಶ್ ಎಚ್ ಶೆಟ್ಟಿ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ವಿ4 ಚಾನೆಲ್‌ನ ಕೆ ಎಂ ಖಲೀಲ್, ಜೊತೆ ಕಾರ್ಯದರ್ಶಿಯಾಗಿ ಉದಯವಾಣಿ ಪತ್ರಿಕೆಯ ಜಗದೀಶ್ ಅಂಡಾರು ಅಯ್ಕೆಯಾಗಿದ್ದಾರೆ. ತಾಲೂಕು ಕಾರ್ಯಕಾರಿ ಸಮಿತಿ ಸದಸ್ಯರಾಗಿ ನಮ್ಮ ಟಿವಿ ವರದಿಗಾರ ಅರುಣ್ ಭಟ್, ಮಾಧ್ಯಮಬಿಂಬ ಪತ್ರಿಕೆಯ ವರದಿಗಾರ ಹರೀಶ್ ಆಚಾರ್ಯ, ಪ್ರಜಾವಾಣಿ ಪತ್ರಿಕೆಯ ವರದಿಗಾರ ವಾಸುದೇವ ಭಟ್, ಉದಯವಾಣಿ ಪತ್ರಿಕೆಯ ವರದಿಗಾರ ಅವಿನಾಶ್ ಬಿ ಶೆಟ್ಟಿಯವರನ್ನು ಆಯ್ಕೆ ಮಾಡಲಾಯಿತು.

ಚುನಾವಣಾ ಪ್ರಕ್ರಿಯೆಯಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸಹಕರಿಸಿದರು.

LEAVE A REPLY

Please enter your comment!
Please enter your name here