ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ 90.4 ಮೆಗಾಹರ್ಟ್ಝ್ ಸಮುದಾಯ ಬಾನುಲಿ ಕೇಂದ್ರವು ಡಾ.ಶಿವರಾಮ ಕಾರಂತ ಟ್ರಸ್ಟ್, ಉಡುಪಿ ಜಿಲ್ಲೆ ಇದರ ಸಹಕಾರದೊಂದಿಗೆ ಅರ್ಪಿಸುತ್ತಿರುವ
ಕಾರಂತ ಯಾನ- ಡಾ.ಶಿವರಾಮ ಕಾರಂತರ ಬದುಕು ಬರಹಗಳ ದರ್ಶನ ಸರಣಿ ಕಾರ್ಯಕ್ರಮದ 7ನೇ ಸಂಚಿಕೆ ಫೆಬ್ರವರಿ ತಿಂಗಳ ದಿನಾಂಕ 16ರಂದು ಸೋಮವಾರ ಸಂಜೆ 5.30ಕ್ಕೆ ಪ್ರಸಾರವಾಗಲಿದೆ. ಇಂದಿನ ಸಂಚಿಕೆಯಲ್ಲಿ ಉಪನ್ಯಾಸಕರಾದ ಶಾಲಿನಿ ಯು.ಬಿ ಅತಿಥಿ ಯಾಗಿ ಭಾಗವಹಿಸಿ ಮಾತನಾಡಲಿದ್ದಾರೆ. ಫೆಬ್ರವರಿ 17 ರಂದು ಮಂಗಳವಾರ ಮಧ್ಯಾಹ್ನ 1.30ಕ್ಕೆ ಇದರ ಮರುಪ್ರಸಾರವಿರುವುದು. ರೇಡಿಯೊದಲ್ಲಿ ಮಾತ್ರವಲ್ಲದೆ
ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal
ಮತ್ತು ಐಫೋನ್ ನ
https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್‌ಲೋಡ್ ಮಾಡಿಕೊಂಡು ಈ ಕಾರ್ಯಕ್ರಮವನ್ನು ಕೇಳಬಹುದಾಗಿದೆ ಎಂದು
ರೇಡಿಯೊ ಮಣಿಪಾಲ್ ನ ಪ್ರಕಟಣೆ ತಿಳಿಸಿದೆ.

