ಫೆ. 18 ರಂದು ರಾಣೇಬೆನ್ನೂರಿನ ಭಾರತೀಯ ವಿದ್ಯಾ ಸಂಸ್ಥೆಯಿಂದ ಗ್ರಂಥಾಲಯ ಹಾಗೂ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ

0
4

ದಾವಣಗೆ: ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದಲ್ಲಿ ಭಾರತೀಯ ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ಫೆಬ್ರವರಿ 18 ರಂದು ಬುಧವಾರ ಬೆಳಿಗ್ಗೆ 10.30ಕ್ಕೆ
ರಾಣೇಬೆನ್ನೂರಿನ ಸಿದ್ದೇಶ್ವರ ನಗರದ ಭಾರತೀಯ ವಿದ್ಯಾ ಕನ್ನಡ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಗ್ರಂಥಾಲಯ ಹಾಗೂ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆಯಾಗಲಿದೆ ಎಂದು ಶಾಲಾ ಆಡಳಿತ ಮಂಡಳಿಯವರು ತಿಳಿಸಿದ್ದಾರೆ.
ಸಮಾರಂಭದ ಉದ್ಘಾಟನೆಯನ್ನು ಕಲಾಕುಂಚ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈಯವರು ನೆರವೇರಿಸಲಿದ್ದಾರೆ. ಹಾಗೂ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದ್ದಾರೆ.
ಮುಖ್ಯ ಅತಿಥಿಗಳಾಗಿ ರಾಣೇಬೆನ್ನೂರಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ಯಾಮಸುಂದರ ಅಡಿಗ, ಕ್ಷೇತ್ರದ ಸಮನ್ವಯ ಅಧಿಕಾರಿಗಳಾದ ಮಂಜುನಾಯ್ಕ, ಕಾಕಿ ಸಮೂಹ ಸಂಸ್ಥೆಗಳ ಮಾಲೀಕರಾದ ಶ್ರೀಮತಿ ರೂಪಾ ಶ್ರೀನಿವಾಸ್ ಕಾಕಿ, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಭಾಗವಂತ ಗೌಡ್ರು ಆಗಮಿಸಲಿದ್ದಾರೆ.
ಈ ಗ್ರಂಥಾಲಯ ಉದ್ಘಾಟನಾ ಸಮಾರಂಭಕ್ಕೆ ಸಾರ್ವಜನಿಕರು ಪುಸ್ತಕ ಓದುವ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ಭಾರತೀಯ ವಿದ್ಯಾ ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಅರ್ಚನಾ ಮಠರವರು ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here