ಉಜಿರೆ: ಬೆಳ್ತಂಗಡಿ ತಾಲ್ಲೂಕಿನ ಪುದುವೆಟ್ಟು ಗ್ರಾಮದ ನಿಡ್ವಾಳದಲ್ಲಿರುವ ಪ್ರಾಚೀನ ಬಸದಿಯನ್ನು ಜೀರ್ಣೋದ್ಧಾರಗೊಳಿಸಿದ್ದು ಭಗವಾನ್ ಪಾರ್ಶ್ವನಾಥ ತೀರ್ಥಂಕರ ಮೂರ್ತಿಯ ಪಂಚಕಲ್ಯಾಣ ಮಹೋತ್ಸವ ಹಾಗೂ ನೂತನ ಬಿಂಬದ ಪ್ರತಿಷ್ಠಾಮಹೋತ್ಸವವು ಫೆ. ೧೮ ರಿಂದ ೨೨ರ ವರೆಗೆ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ನಡೆಯಲಿದೆ.
ಪೂಜ್ಯ ಏಲಾಚಾರ್ಯ ಪ್ರಸಂಗಸಾಗರ ಮುನಿಮಹಾರಾಜರ ದಿವ್ಯ ಉಪಸ್ಥಿತಿಯಲ್ಲಿ ಸಮಾರಂಭ ನಡೆಯಲಿದ್ದು ಪೂಜ್ಯರು ಇಂದು ಮಂಗಳವಾರ ಧರ್ಮಸ್ಥಳದಿಂದ ಹೊರಟು ಪುದುವೆಟ್ಟು ಪುರಪ್ರವೇಶ ಮಾಡುವರು.
ನಾಳೆ ಬುಧವಾರ ಮುಂಜಾನೆ ಏಳು ಗಂಟೆಯಿAದ ಇಂದ್ರಪ್ರತಿಷ್ಠೆ, ತೋರಣಮುಹೂರ್ತ, ವಿಮಾನಶುದ್ಧಿ ಮೊದಲಾದ ಕಾರ್ಯಕ್ರಮಗಳು ನಡೆಯಲಿವೆ.

