ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ ಫೆ.28 ರಿಂದ ಮಾರ್ಚ್ 17 ರ ವರೆಗೆ ಹಾಗೂ ಎಸ್ಎಸ್ಎಲ್‌ಸಿ ಪರೀಕ್ಷೆಗಳು ಮಾರ್ಚ್ 18 ರಿಂದ ಏಪ್ರಿಲ್ 2 ರ ವರೆಗೆ ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಈ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಫೆ.28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ, ಮಾ. 18 ರಿಂದ ಎಸ್‌ಎಸ್ಎಲ್‌ಸಿ ಪರೀಕ್ಷೆಗಳು ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆದರೆ, ಎಸ್ಎಸ್ಎಲ್‌ಸಿ ಪರೀಕ್ಷೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1:15 ಗಂಟೆ ವರೆಗೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

