ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಹಮೀದ್ ಪಡುಬಿದ್ರಿ ಆಯ್ಕೆ

0
12

ಕಾರ್ಯದರ್ಶಿಯಾಗಿ ಪುಂಡಲೀಕ ಮರಾಠೆ ಶಿರ್ವ, ಕೋಶಾಧಿಕಾರಿಯಾಗಿ ಸಂತೋಷ್ ಕಾಪು ಆಯ್ಕೆ

ಕಾಪು : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾಪು ತಾಲೂಕು ಘಟಕದ 2025-28ನೇ ಸಾಲಿನ ನೂತನ ಅಧ್ಯಕ್ಷರಾಗಿ ಪ್ರಜಾವಾಣಿಯ ಹಮೀದ್ ಪಡುಬಿದ್ರಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಹೊಸದಿಗಂತದ ಪುಂಡಲೀಕ ಮರಾಠೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ.ಕುರ್ಯ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಕಾಪು ಪತ್ರಿಕಾ ಭವನದಲ್ಲಿ ನಡೆದ ಚುನಾವಣೆಯಲ್ಲಿ ಈ ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರಾಗಿ ವಿಜಯವಾಣಿಯ ಹೇಮನಾಥ ಪಡುಬಿದ್ರಿ, ಕೋಶಾಧಿಕಾರಿಯಾಗಿ ಸ್ಪಂದನಾ ಟಿವಿಯ ಸಂತೋಷ್ ನಾಯ್ಕ್, ಕಾರ್ಯದರ್ಶಿಯಾಗಿ ಉದಯವಾಣಿಯ ಸತೀಶ್ಚಂದ್ರ ಶೆಟ್ಟಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.

7 ಜನ ಕಾರ್ಯಕಾರಿಣಿ ಸಮಿತಿ ಸದಸ್ಯರುಗಳಾಗಿ ಸಂಘದ ಸದಸ್ಯರು ಆಯ್ಕೆ ಆಗಿದ್ದಾರೆ.

ಚುನಾವಣಾ ಪ್ರಕ್ರಿಯೆಯಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಹಾಗೂ ರಾಜ್ಯ ಸಮಿತಿ ಸದಸ್ಯ ಅಸ್ಟ್ರೋ ಮೋಹನ್ ಸಹಕರಿಸಿದರು.

ಈ ಸಂದರ್ಭದಲ್ಲಿ ಸಂಘದ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here