ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ

0
10

ಬೆಂಗಳೂರು: ವಿಶ್ವವಿದ್ಯಾಲಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ  ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯಮತ್ತು ಉನ್ನತ ಶಿಕ್ಷಣ ಕ್ಷೇತ್ರದ ಸವಾಲುಗಳ ಕುರಿತು ಪ್ರಮುಖ ಹೇಳಿಕೆಗಳನ್ನು ನೀಡಿದ್ದಾರೆ. ವಿಶ್ವವಿದ್ಯಾಲಯಗಳಲ್ಲಿ ಮೌಲ್ಯವರ್ಧನೆಗೆ ಶಿಕ್ಷಕರು ಅತ್ಯಗತ್ಯ. ಪ್ರಸ್ತುತ, ವಿಶ್ವವಿದ್ಯಾಲಯಗಳಲ್ಲಿ ಸುಮಾರು ಶೇ.65ರಷ್ಟು ಬೋಧಕ ಸಿಬ್ಬಂದಿ ಹುದ್ದೆಗಳು ಖಾಲಿ ಇವೆ. ಈ ಕೊರತೆಯನ್ನು ನಿಭಾಯಿಸಲು ಸರ್ಕಾರ ಬದ್ಧವಾಗಿದೆ. ಕಳೆದ ವರ್ಷ 2000 ಶಿಕ್ಷಕರನ್ನು ಭರ್ತಿ ಮಾಡಲಾಗಿದೆ. ಮುಂದೆಯೂ ಹಂತ ಹಂತವಾಗಿ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರಿಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ. ಆದಾಗ್ಯೂ, ನೇಮಕಾತಿ ಆಗುವವರೆಗೆ ಕಾಯಲು ಸಾಧ್ಯವಿಲ್ಲದ ಕಾರಣ ಅತಿಥಿ ಉಪನ್ಯಾಸಕರ ಸೇವೆಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here