ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮತ್ತೆ ಏರಿಕೆಯ ಹಾದಿಗೆ ಬಂದಂತಿದೆ. ಈ ವಾರಾಂತ್ಯದಲ್ಲಿ ಚಿನ್ನದ ಬೆಲೆಯಲ್ಲಿ (Gold Rates) ಗ್ರಾಮ್ಗೆ 285 ರೂನಷ್ಟು ಹೆಚ್ಚಳ ಆಗಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲಿ ಬಹುತೇಕ ಕಡೆ ಇದರ ಬೆಲೆಯಲ್ಲಿ ಏರಿಕೆ ಆಗಿದೆ. ಬೆಳ್ಳಿ ಬೆಲೆಯೂ ಕೂಡ ಗ್ರಾಮ್ಗೆ 5 ರೂನಿಂದ 20 ರೂವರೆಗೆ ಹೆಚ್ಚಳ ಆಗಿದೆ. ಬೆಂಗಳೂರು ಮೊದಲಾದೆಡೆ ಬೆಳ್ಳಿ ಬೆಲೆ 5 ರೂ ಏರಿ 275 ರೂ ಮುಟ್ಟಿದೆ. ಚೆನ್ನೈ ಮೊದಲಾದೆಡೆ ಬೆಲೆ 20 ರೂ ಹೆಚ್ಚಳಗೊಂಡು 290 ರೂ ಮುಟ್ಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,46,000 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,59,280 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 27,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,46,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 27,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 29,000 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಫೆಬ್ರುವರಿ 22ಕ್ಕೆ)
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,928 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,600 ರೂ
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,946 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ
- ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.

