
ಉಡುಪಿ: ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಮತ್ತು ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ಕರ್ನಾಟಕ ರಾಜ್ಯಾಧ್ಯಕ್ಷರಾದ ರಚನ್ ಸಾಲ್ಯಾನ್ ಅವರ ಹುಟ್ಟುಹಬ್ಬದ ಪ್ರಯುಕ್ತ, ಸ್ವಯಂಪ್ರೇರಿತ ರಕ್ತದಾನ ಶಿಬಿರ ನಡೆಯಿತು.
ರಕ್ತ ಕೇಂದ್ರ ಕೆ.ಎಂ.ಸಿ ಮಣಿಪಾಲ ಇವರ ಸಹಯೋಗದೊಂದಿಗೆ ಈ ಕಾರ್ಯಕ್ರಮವು ನಡೆಯಲಿದೆ. ರಕ್ತದಾನವು ಜೀವದಾನಕ್ಕೆ ಸಮಾನವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಯುವಜನತೆ ಭಾಗವಹಿಸಿದ್ದರು.

ಹುಟ್ಟು ಹಬ್ಬದ ಅಂಗವಾಗಿ ಮಣಿಪಾಲ್ ಟಿ.ಎಮ್.ಎ ಪೃೆ ಹಾಲ್ ನಲ್ಲಿ ನಡೆದ ರಕ್ತದಾನ ಶಿಬಿರಕ್ಕೆ ಸಂಸದರಾದ ಮಾನ್ಯ ಕೋಟ ಶ್ರೀನಿವಾಸ್ ಪೂಜಾರಿಯವರು ಅಗಮಿಸಿ ಕಾರ್ಯಕ್ರಮದ ಯಶಸ್ವಿಗೆ ಶುಭಾಶಯ ಸಲ್ಲಿಸಿ, ಆಶೀರ್ವಾದ ನೀಡಿದರು.

