ಉಡುಪಿ, ಫೆಬ್ರವರಿ 23: ಕಾಪು ತಾಲೂಕು ಕಟಪಾಡಿ ಏಣಗುಡ್ಡೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ, ನಗರದ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದ ಮೂಲತಃ ಬಿಜಾಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ದೀಪ ಸುರೇಶ ಲಮಾಣಿ (20) ಎನ್ನುವ ಯುವತಿಯು ಫೆಬ್ರವರಿ 20 ರಂದು ಕಾಲೇಜಿಗೆ ರಜೆ ಮಾಡಿ ಮನೆಯಿಂದ ಹೊರ ಹೋದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ.
5 ಅಡಿ 6 ಇಂಚು ಎತ್ತರ, ಗೋಧಿ ಮೈಬಣ್ಣ, ಸಪೂರ ಶರೀರ ಹೊಂದಿದ್ದು, ಕನ್ನಡ, ಲಂಬಾಣಿ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ ದೂ.ಸಂ: 0820-2526709/2526444, ಕಾರ್ಕಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ಕಚೇರಿ ದೂ.ಸಂ: 08258-231333, ಕಾಪು ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂ: 0820-2572333, ಮೊಬೈಲ್: 9480805431, ಕಾಪು ಪೊಲೀಸ್ ಠಾಣೆ ಪೊಲೀಸ್ ಉಪ ನಿರೀಕ್ಷಕರ ಕಚೇರಿ ದೂ.ಸಂ: 0820-2551033, ಮೊಬೈಲ್: 9480805449 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾಪು ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ವರದಿ ವಿನೋದ್ ಶೆಟ್ಟಿ ಉಡುಪಿ

