ಡಾ.ರಾಮಕೃಷ್ಣ ಶಿರೂರು ಅವರಿಗೆ ಕವಿ ಕಾವ್ಯ ವಿಭೂಷಣ ಪ್ರಶಸ್ತಿ ಪ್ರದಾನ

0
14

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಹುಲಿ ರೋಸರಿ ಪ್ರೌಢಶಾಲೆಗೆ ಕನ್ನಡ ಅಧ್ಯಾಪಕ ಡಾಕ್ಟರ್ ರಾಮಕೃಷ್ಣ ಶಿರೂರು ಅವರಿಗೆ ಕೇರಳ ರಾಜ್ಯದ ಕಾಸರಗೋಡಿನಲ್ಲಿ ಕವಿ ಕಾವ್ಯ ವಿಭೂಷಣ ರಾಷ್ಟ್ರ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಕೇರಳ ರಾಜ್ಯದ ಕಾಸರಗೋಡಿನ ಕನ್ನಡ ಭವನದಲ್ಲಿ ನಡೆದ ಕೇರಳ ಕರ್ನಾಟಕ ಸಾಹಿತ್ಯ ಸಮ್ಮೇಳನದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಮಾರಂಭದಲ್ಲಿ ಎಡೆ ನೀರು ಮಠಾಧೀಶರಾದ ಶ್ರೀ ಶ್ರೀ ಸಚ್ಚಿದಾನಂದ ಶ್ರೀಪಾದರು, ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗೋನಾಳದ ಶ್ರೀ ಶ್ರೀ ರಮೇಶ ಸ್ವಾಮೀಜಿ, ಕಾಸರಗೋಡು ಕನ್ನಡ ಭವನದ ರೂವಾರಿ ಡಾ. ವಾಮನ ರಾವ್ ಬೇಕಲ್, ಸಂಧ್ಯಾ ರಾಣಿ ಟೀಚರ್, ಚುಟುಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ. ಕೃಷ್ಣಪ್ರಸಾದ್ ಕೂಡ್ಲು, ಕೇರಳ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷರಾದ ಪ್ರದೀಪ್ ಕುಮಾರ ಕಲ್ಕೂರ, ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ಡಾ. ವೆಂಕಟರಮಣ ಹೊಳ್ಳ, ಕನ್ನಡ ಹೋರಾಟಗಾರ, ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಸಂಚಾಲಕರಾದ ನಂ. ವಿಜಯಕುಮಾರ್, ಕವಿಗಳಾಗಿರುವ ಡಾ.ಸುರೇಶ ನೆಗಳಗುಳಿ, ಡಾ. ಕೊಳಚಪ್ಪೆ ಗೋವಿಂದ ಭಟ್, ಕನ್ನಡ ಭವನದ ಕಾರ್ಯದರ್ಶಿ ವಸಂತ ಕೆರೆಮನೆ, ಹಿರಿಯ ಕವಿ ಜಯಾನಂದ ಪೆರಾಜೆ, ಕಾಸರಗೋಡು ಕನ್ನಡ ಭವನದ ಗದಗ ಜಿಲ್ಲಾ ಘಟಕದ ಅಧ್ಯಕ್ಷರಾದ ಡಾ. ಸಂಗಮೇಶ ತಮ್ಮನ ಗೌಡರ್, ಉಪಾಧ್ಯಕ್ಷರಾದ ರತ್ನ ಸಿ.ಬದಿ, ಬೆಳಗಾವಿಯ ಪತ್ರಕರ್ತ ಸಿ. ವೈ. ಟಿಮೆಣಸಿನ ಕಾಯಿ, ಡಾ. ಶಾಂತ ಪುತ್ತೂರು ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಅದ್ದೂರಿ ಸಮಾರಂಭದಲ್ಲಿ ವೈಭವದಿಂದ ಪ್ರಶಸ್ತಿ ಪ್ರದಾನ ಮಾಡಲಾಯಿತು.

LEAVE A REPLY

Please enter your comment!
Please enter your name here