ಮಣಿಪಾಲ : ಬೈಕ್ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾದ ಕೆಲವೆ ಗಂಟೆಗಳಲ್ಲಿ ಆರೋಪಿಗಳನ್ನು ಅರೆಸ್ಟ್ ಮಾಡುವಲ್ಲಿ ಮಣಿಪಾಲ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತರನ್ನು 80 ಬಡಗಬೆಟ್ಟು ಗ್ರಾಮದ ನೇತಾಜಿನಗರ ನಿವಾಸಿ ಶರತ್ (26) ಹಾಗೂ ಗಣೇಶ್ (31) ಎಂದು ಗುರುತಿಸಲಾಗಿದೆ.
80 ಬಡಗುಬೆಟ್ಟು ಗ್ರಾಮದ ರಾಹುಲ್‌ನಗರದ ವೀರ ಮಾರುತಿ ಭಜನಾ ಮಂದಿರ ಬಳಿ ಸುದರ್ಶನ್ ಎಂಬವರು ಫೆಬ್ರವರಿ 21ರಂದು ನಿಲ್ಲಿಸಿದ್ದ ಬೈಕ್ ಕಳವಾಗಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಪ್ರಕರಣ ದಾಖಲಿಸಿದ 11 ಗಂಟೆಯಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳ ವಶದಲ್ಲಿದ್ದ ಬೈಕ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬಂಧಿತರ ವಿರುದ್ಧ ಮಣಿಪಾಲ, ಉಡುಪಿ ನಗರ, ಭದ್ರಾವತಿ, ಕೊಪ್ಪ, ತೀರ್ಥಹಳ್ಳಿ, ಮಡಿಕೇರಿ ಹಾಗೂ ತುಮಕೂರು ಪೊಲೀಸ್ ಠಾಣೆಗಳಲ್ಲಿ 11ಕ್ಕೂ ಅಧಿಕ ಕಳವು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

