ಸುಖಾಂತ್ಯ ಕಂಡ ಐಕಳ ಮತ್ತು ಕನ್ಯಾನರ ಮನಸ್ತಾಪಗಳು

0
15

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿಯವರು ಮನ ನೊಂದು ಇನ್ನು ಮುಂದೆ ಸಮಾಜ ಸೇವೆಗೆ ತನ್ನ ಯಾವುದೇ ಕೊಡುಗೆ ಇಲ್ಲವೆಂದು ಹೇಳಿಕೆ ನೀಡಿರುವ ವಿಡಿಯೋ ಸಾಮಾಜಿಕವಾಗಿ ಪರ ವಿರೋಧ ಚರ್ಚೆಗೆ ಕಾರಣವಾಗಿದ್ದು, ಈ ಬಗ್ಗೆ ಮಾಜಿ ಸಂಸದರಾದ ಗೋಪಾಲ್ ಶೆಟ್ಟಿಯವರ ಸಮಕ್ಷಮದಲ್ಲಿ, ಬಂಜಾರ ಪ್ರಕಾಶ್ ಶೆಟ್ಟಿ, ಅಜಿತ್ ಕುಮಾರ್ ರೈ ಮಾಲಾಡಿ, ಸದಾನಂದ ಶೆಟ್ಟಿ ಕ್ವಾಲಿಟಿ, ಸಾಯಿ ಪ್ಯಾಲೇಸ್ ರವಿ ಸುಂದರ್ ಶೆಟ್ಟಿ, ಕೆ. ಎಮ್. ಶೆಟ್ಟಿ, ಕೆ.ಡಿ. ಶೆಟ್ಟಿ, ಪ್ರವೀಣ್ ಭೋಜ ಶೆಟ್ಟಿ, ಡಾ. ವಿರಾರ್ ಶಂಕರ್ ಶೆಟ್ಟಿ, ರಾಜೇಂದ್ರ ಶೆಟ್ಟಿ ಪಂಜುರ್ಲಿ ಗ್ರೂಪ್ಸ್, ಉದಯ್ ಕುಮಾರ್ ಶೆಟ್ಟಿ ಮುನಿಯಾಲು, ಪವರ್ ಟಿವಿಯ ರಾಕೇಶ್ ಶೆಟ್ಟಿ ಮತ್ತು ಸಮಾಜದ ಗಣ್ಯರ ಆಶಯದಂತೆ ಬರೋಡ ಶಶಿಧರ ಶೆಟ್ಟಿ, ಮಹೇಶ್ ಶೆಟ್ಟಿ ತೆಳ್ಳಾರ್, ರಾಜೇಶ್ ಶೆಟ್ಟಿ ರಾಕ್ಷಿ ಬಿಲ್ಡರ್ಸ್ , ಪಟ್ಲ ಸತೀಶ್ ಶೆಟ್ಟಿ, ಕೆ. ಕೆ. ಶೆಟ್ಟಿ ಅಹ್ಮದ್ ನಗರ, ಅಶೋಕ್ ಶೆಟ್ಟಿ ಬೆಳ್ಳಾಡಿ, ಅರವಿಂದ್ ಆನಂದ್ ಶೆಟ್ಟಿ, ಗಿರೀಶ್ ಶೆಟ್ಟಿ ತೆಳ್ಳಾರ್, ಶಶಿಧರ ಶೆಟ್ಟಿ ಇನ್ನಂಜೆ, ಉಳ್ತೂರು ಮೋಹನದಾಸ ಶೆಟ್ಟಿ, ಅಶೋಕ್ ಶೆಟ್ಟಿ ಕಲ್ಪವೃಕ್ಷ ಇವರುಗಳ ಉಪಸ್ಥಿತಿಯಲ್ಲಿ ಮುಂಬೈಯ ಖಾಸಗಿ ಸ್ಥಳದಲ್ಲಿ ನಡೆದ ಸಭೆಯಲ್ಲಿ ಮಾತುಕತೆ ನಡೆಸಿ ಕನ್ಯಾನ ಸದಾಶಿವ ಶೆಟ್ಟಿ ಹಾಗೂ ಐಕಳ ಹರೀಶ್ ಶೆಟ್ಟಿಯವರ ನಡುವಿನ ಮನಸ್ತಾಪವನ್ನು ಸುಖಾಂತ್ಯಗೊಳಿಸಲಾಯಿತು.

ಈ ಸಂದರ್ಭದಲ್ಲಿ ಫೋನ್ ಮೂಲಕ ಐಕಳ ಹಾಗೂ ಅಶೋಕ್ ಪಕ್ಕಳರ ನಡುವೆ ರಾಜಿ ಮಾತುಕತೆ ನಡೆಸಿ ಅವರೀರ್ವರ ನಡುವೆ ನಡೆದ ಪ್ರಕರಣವನ್ನು ಕೂಡ ಮುಕ್ತಾಯಗೊಳಿಸಲಾಯಿತು.

ಸಮಾಜದ ಒಳಿತಿಗಾಗಿ ಪ್ರಕರಣವನ್ನು ಸುಖಾಂತ್ಯಗೊಳಿಸಿದ ಎಲ್ಲಾ ಮಹನೀಯರಿಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪದಾಧಿಕಾರಿಗಳಾದ ಕರ್ನಿರೆ ವಿಶ್ವನಾಥ ಶೆಟ್ಟಿ, ಜಯಕರ್ ಶೆಟ್ಟಿ ಇಂದ್ರಾಳಿ, ಉಳ್ತೂರು ಮೋಹನದಾಸ್ ಶೆಟ್ಟಿ, ಚಂದ್ರಹಾಸ್ ಡಿ ಶೆಟ್ಟಿ ರಂಗೋಲಿ, ಕೊಲ್ಲಾಡಿ ಬಾಲಕೃಷ್ಣ ರೈ, ಶ್ರೀಮತಿ ಉಮಾಕೃಷ್ಣ ಶೆಟ್ಟಿ ಮತ್ತು ಗಿರೀಶ್ ಶೆಟ್ಟಿ ತೆಳ್ಳಾರ್ ಹಾಗೂ ಸಿಬ್ಬಂದಿ ವರ್ಗದವರಿಂದ ತುಂಬು ಹೃದಯದ ಧನ್ಯವಾದಗಳು.

ವರದಿ ವಿನೋದ್ ಶೆಟ್ಟಿ ಉಡುಪಿ

LEAVE A REPLY

Please enter your comment!
Please enter your name here